ETV Bharat / state

ಚಂಬಲ್ ಕಣಿವೆಯ ಡಕಾಯಿತರಂತೆ ರಮೇಶ್ ಜಾರಕಿಹೊಳಿ ಗೂಂಡಾಪಡೆ ವರ್ತಿಸುತ್ತಿದೆ : ಕಾಂಗ್ರೆಸ್ ಟ್ವೀಟ್ - ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರು

ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡ ಪೋಕರಿಗಳಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ರಮೇಶ್ ಜಾರಕಿಹೊಳಿಯವರೇ. ಬಸವರಾಜ್ ಬೊಮ್ಮಾಯಿ, ಬಿಎಸ್‌ವೈ ಅವರೇ ಆರೋಪಿಯನ್ನು ಬಂಧಿಸದೇ ಕಲ್ಲೆಸೆದು, ದಾಂಧಲೆ ಎಬ್ಬಿಸುವ ಭಯೋತ್ಪಾದಕ ಕೃತ್ಯವೆಸಗಲು ಕಳಿಸಿದ್ದೀರಾ? ಎಂದು ಪ್ರಶ್ನಿಸಲಾಗಿದೆ..

karnataka-state-congress-tweet
ಕಾಂಗ್ರೆಸ್ ಟ್ವೀಟ್
author img

By

Published : Mar 28, 2021, 5:37 PM IST

ಬೆಂಗಳೂರು : ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇದಿನೆ ಸ್ಪಷ್ಟವಾಗುತ್ತಿದೆ. ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ರಮೇಶ್ ಜಾರಕಿಹೊಳಿಯ ಗೂಂಡಾ ಪಡೆ ವರ್ತಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಓದಿ: ಡಿಕೆಶಿ ಬೆಂಬಲಿಸಿ ಕೈ ಕಾರ್ಯಕರ್ತರ ಪ್ರತಿಭಟನೆ: ಸದಾಶಿವನಗರದಲ್ಲಿ ಹೈಡ್ರಾಮ

ರಮೇಶ್ ಜಾರಕಿಹೊಳಿಯ ಚಡ್ಡಿಯ ಲಾಡಿಯೂ ಸಡಿಲ, ನಾಲಿಗೆಯೂ ಸಡಿಲ, ಬುದ್ಧಿಯೂ ಸಡಿಲ ಅನ್ನೋದನ್ನ ಜಗತ್ತು ನೋಡಿದೆ. ರಾಜ್ಯದ ಮರ್ಯಾದೆ ದಿನ ದಿನಕ್ಕೂ ಕುಸಿಯುತ್ತಿದೆ. ಹೀಗಿದ್ದರೂ ಅತ್ಯಾಚಾರಿ ಆರೋಪಿಯನ್ನು ಗೂಳಿಯಂತೆ ತಿರುಗಲು ಬಿಟ್ಟಿದ್ದು, ಸರ್ಕಾರದ ನೀಚತನವೋ ಅಥವಾ ಪೊಲೀಸರ ಹೇಡಿತನವೋ?

ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡ ಪೋಕರಿಗಳಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ರಮೇಶ್ ಜಾರಕಿಹೊಳಿಯವರೇ. ಬಸವರಾಜ್ ಬೊಮ್ಮಾಯಿ, ಬಿಎಸ್‌ವೈ ಅವರೇ ಆರೋಪಿಯನ್ನು ಬಂಧಿಸದೇ ಕಲ್ಲೆಸೆದು, ದಾಂಧಲೆ ಎಬ್ಬಿಸುವ ಭಯೋತ್ಪಾದಕ ಕೃತ್ಯವೆಸಗಲು ಕಳಿಸಿದ್ದೀರಾ? ಎಂದು ಪ್ರಶ್ನಿಸಲಾಗಿದೆ.

ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯ, ಪೊಲೀಸರ ಕಳಪೆ ಕಾರ್ಯಕ್ಷಮತೆ ಈ ಸಿಡಿ ಪ್ರಕರಣದಲ್ಲಿ ಬಯಲಾಗಿದೆ. ದೂರು ದಾಖಲಾಗಿದ್ದರೂ ಅತ್ಯಾಚಾರ ಆರೋಪಿ ಬಂಧಿಸದೆ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಶೋಷಣೆಗೊಳಪಟ್ಟ ಸಾಮಾನ್ಯ ಹೆಣ್ಣು ಮಗಳನ್ನು ಪತ್ತೆಹಚ್ಚಿ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.