ETV Bharat / state

ರಾಜ್ಯಾದ್ಯಂತ ಪೊಲೀಸರ ಮಿಂಚಿನ ಕಾರ್ಯಾಚರಣೆ.. 40ಕ್ಕೂ ಹೆಚ್ಚು ಪಿಎಫ್​ಐ ಕಾರ್ಯಕರ್ತರು ವಶಕ್ಕೆ - ರಾಜ್ಯಾದ್ಯಂತ ಪೊಲೀಸರ ಮಿಂಚಿನ ಕಾರ್ಯಾಚರಣೆ

ರಾಜ್ಯದಲ್ಲಿ ಈ ಬಾರಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. 40ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Karnataka state police detained  Karnataka state police detained many pfi workers  Karnataka state police raid on PFI  ಪಿಎಫ್ಐ ಕಾರ್ಯಕರ್ತರ ಮೇಲೆ ಮುಂದುವರಿದ ದಾಳಿ  ರಾಜ್ಯ ಪೊಲೀಸರಿಂದ 40ಕ್ಕೂ ಹೆಚ್ಚು ಕಾರ್ಯಕರ್ತರು ವಶ  ಸ್ಟೇಟ್​ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಮೇಲೆ ದಾಳಿ  ಸಮಾಜದ ಸ್ವಾಸ್ಯ ಹಾಳು ಮಾಡಲು ಸಂಚು  ದೇಶ ವಿದೇಶಗಳಿಂದ ದೇಣಿಗೆ ಸಂಗ್ರಹ  ಪಿಎಫ್ಐ ಜೊತೆ ನಂಟು ಹೊಂದಿದ ಆರೋಪ
ಪಿಎಫ್ಐ ಕಾರ್ಯಕರ್ತರ ಮೇಲೆ ಮುಂದುವರಿದ ದಾಳಿ
author img

By

Published : Sep 27, 2022, 8:18 AM IST

ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳಿಗೆ ಹಣ ಸಂಗ್ರಹಿಸಿ ಸಮಾಜದ ಸ್ವಾಸ್ಯ ಹಾಳು ಮಾಡಲು ಸಂಚು ರೂಪಿಸಿದ್ದ ಆರೋಪದಡಿ ಪಿಎಫ್​ಎ ಮುಖಂಡರ ಹಾಗೂ ಕಾರ್ಯಕರ್ತರ ಮೇಲೆ ದಾಳಿ ಮುಂದುವರೆದಿದೆ. ದೇಶ-ವಿದೇಶಗಳಿಂದ ಹಣ ಸಂಗ್ರಹ ಆಪಾದನೆಯಡಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ‌ ಪಿಎಫ್ಐಗೆ ಸೇರಿದ ವ್ಯಕ್ತಿಗಳ ಮೇಲೆ ಇಂದು ಬೆಳ್ಳಂಬೆಳ್ಳಗೆ ರಾಜ್ಯ ಪೊಲೀಸರು ದಾಳಿ ನಡೆಸಿ‌ 40 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದೇಶ-ವಿದೇಶಗಳಿಂದ ದೇಣಿಗೆ ಸಂಗ್ರಹಿಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ಇತ್ತೀಚೆಗೆ ಎನ್ಐಎ ದೇಶದ ಎಲ್ಲಾ‌ ಕಡೆಗಳಲ್ಲಿ ದಾಳಿ ಪ್ರಮುಖ ಮುಖಂಡರನ್ನು ವಶಕ್ಕೆ ಪಡೆದುಕೊಂಡಿತ್ತು. ರಾಜ್ಯವಲ್ಲದೆ ಬೆಂಗಳೂರು ನಗರ ಪೊಲೀಸರು ಸಹ ಕಾರ್ಯಕರ್ತರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ 15 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ರಾಜ್ಯದ ಉದ್ದಗಲಕ್ಕೂ ಪಿಎಫ್ಐ ಜೊತೆ ನಂಟು ಹೊಂದಿದ ಆರೋಪ ಹಿನ್ನೆಲೆಯಲ್ಲಿ ಬೀದರ್, ರಾಯಚೂರು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಎಫ್‌ಐ ಕಾರ್ಯಕರ್ತ ಮತ್ತು ನಾಯಕರಿಗೆ ಸೇರಿದ ಸ್ಥಳ, ಕಚೇರಿ ಮತ್ತು ನಿವಾಸದ ಮೇಲೆ ದಾಳಿಯನ್ನು ನಡೆಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಹಣಕಾಸಿನ ನೆರವನ್ನು ಪಡೆದ ಅನುಮಾನದ ಮೇಲೆ ಈ ಮಹತ್ವದ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ. ಜಿಲ್ಲೆಗಳಲ್ಲಿ ಜೆಲ್ಲೆಗಳ ಎಸ್ಪಿ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಈಗಾಗಲೇ 40ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವ ರಾಜ್ಯ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್‌ ಕುಮಾರ್ ಈ ದಾಳಿಯ ಮಾನಿಟರಿಂಗ್ ಮಾಡುತ್ತಿದ್ದು, ಯಾವ ಜಿಲ್ಲೆಯಲ್ಲಿ ಎಷ್ಟು ಜನರನ್ನು ವಶಕ್ಕೆ ಪಡೆದಿದ್ದಾರೆ? ಮನೆ, ಕಚೇರಿಗಳಲ್ಲಿ ಯಾವೆಲ್ಲಾ ವಸ್ತುಗಳು ಸಿಕ್ಕಿವೆ ಎನ್ನವುದರ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ..

ಓದಿ: ಬಳ್ಳಾರಿಯಲ್ಲಿ ಯುವಕನ ಮೇಲೆ PFI ಪ್ರತಿಭಟನಾಕಾರರ ಹಲ್ಲೆ.. ವಿಡಿಯೊ ವೈರಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.