ETV Bharat / state

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ-2020ಕ್ಕೆ ವಿಧಾನಸಭೆ ಒಪ್ಪಿಗೆ - Karnataka State Universities Amendment Bill-2020 Presented

ಡಿಸಿಎಂ ಅಶ್ವತ್ಥ ನಾರಾಯಣ ಸದನದಲ್ಲಿ ʼಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಕೆಲವು ಇತರೆ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ-2020ʼ ಮಂಡಿಸಿದರು.

Karnataka State Universities Amendment Bill-2020
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ-2020
author img

By

Published : Dec 9, 2020, 8:50 PM IST

ಬೆಂಗಳೂರು: ದೂರ ಶಿಕ್ಷಣ ಪದ್ಧತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತಗೊಳಿಸುವ, ಬೆಂಗಳೂರು ವಿವಿ ಹೆಸರನ್ನು ಬದಲಾಯಿಸುವ ಅಂಶವೂ ಸೇರಿದಂತೆ ಉನ್ನತ ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಮಹತ್ವದ ಆಡಳಿತಾತ್ಮಕ, ಕಾನೂನಾತ್ಮಕ ಸುಧಾರಣೆಗಳುಳ್ಳ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ.

ಡಿಸಿಎಂ ಅಶ್ವತ್ಥ ನಾರಾಯಣ ಸದನದಲ್ಲಿ ʼಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಕೆಲವು ಇತರೆ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ-2020ʼ ಮಂಡಿಸಿದರು.

ಈ ಮೊದಲು ದೂರ ಶಿಕ್ಷಣವು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿಯೂ ಲಭ್ಯವಿತ್ತು. ಇನ್ನು ಮುಂದೆ ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಮಾತ್ರ ದೂರ ಶಿಕ್ಷಣ ನೀಡಲಾಗುತ್ತದೆ. ಮುಕ್ತ ವಿವಿಯ ವ್ಯಾಪ್ತಿಯೂ ರಾಜ್ಯಾದ್ಯಂತ ಇದ್ದು, ಇನ್ನು ಮುಂದೆ ಇತರೆ ವಿವಿಗಳಲ್ಲಿ ದೂರ ಶಿಕ್ಷಣ ನೀಡುವುದನ್ನು ನಿಲ್ಲಿಸಲಾಗುತ್ತದೆ.

ಬೆಂಗಳೂರಿನಲ್ಲಿ ಕೇಂದ್ರ ಸ್ಥಾನ ಹೊಂದಿರುವ ಸರ್ಕಾರಿ ವಿಜ್ಞಾನ ಕಾಲೇಜು ಸಂಸ್ಥೆಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪ್ರತ್ಯೇಕಗೊಳಿಸಿ ʼಏಕಾತ್ಮಕ ಸ್ವರೂಪದ ನೃಪತುಂಗಾ ವಿವಿʼಯನ್ನು ಸ್ಥಾಪಿಸಲಾಗುತ್ತಿದ್ದು, ಇದರ ಕೇಂದ್ರ ಸ್ಥಾನವು ಬೆಂಗಳೂರು ನಗರದಲ್ಲೇ ಇರುತ್ತದೆ. ಗುಣಮಟ್ಟದ ಶಿಕ್ಷಣ ಹಾಗೂ ಸಂಪನ್ಮೂಲ ಕೊರತೆ ಆಗದಂತೆ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಆದಾಯ ತೆರಿಗೆ ವಿನಾಯಿತಿ ಪ್ರಯೋಜನಗಳನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ.

ಮಹಾರಾಣಿ ಕ್ಲಸ್ಟರ್‌, ಬೆಂಗಳೂರು ಮತ್ತು ಮಂಡ್ಯ ಏಕೀಕೃತ ವಿವಿಗಳಿಗೆ ಉಪ ಕುಲಪತಿಗಳನ್ನು ಸರ್ಕಾರದಿಂದಲೇ ನೇಮಕ ಮಾಡುವುದು. ಎಲ್ಲಾ ವಿವಿಗಳಿಗೆ ಆಡಳಿತಾಧಿಕಾರಿ ಅಥವಾ ಕುಲಸಚಿವರನ್ನಾಗಿ ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳನ್ನು ನೇಮಕ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ʼಬೆಂಗಳೂರು ನಗರ ವಿಶ್ವವಿದ್ಯಾಲಯʼ ಎಂದು ಮರು ನಾಮಕರಣ ಮಾಡಲಾಗುವುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.