ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಆ. 28 ರವರೆಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಮಾತನಾಡಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರವಾಗಿ, ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೂಡಾ ಹಗುರವಾಗಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಹಗುರವಾಗಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚು ಮಳೆ ಬೆಳ್ತಂಗಡಿಯಲ್ಲಿ ದಾಖಲಾಗಿದ್ದು 2 ಸೆಂ.ಮೀ ಮಳೆಯಾಗಿದೆ. ಉತ್ತರ ಒಳನಾಡಿನ ತಾವರಕೆರೆಯಲ್ಲಿ 2 ಸೆಂ.ಮೀ , ದಕ್ಷಿಣ ಒಳನಾಡಿನ ವನಕೇರಿಯಲ್ಲಿ 2 ಸೆಂ.ಮೀ ಮಳೆಯಾಗಿದೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಆ. 25 ರಂದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಹಗುರವಾಗಿ ಮಳೆಯಾಗಬಹುದು. ಆ. 26 ರಿಂದ 28 ರವರೆಗೆ ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 25 ರಿಂದ 28 ರವರೆಗೆ ಹಗುರದಿಂದ ಸಾಧಾರಣವಾಗಿ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಗಳು ಇವೆ ಎಂದರು.