ಬೆಂಗಳೂರು: ರಾಜ್ಯದಲ್ಲಿ ಇಂದೂ ಸೇರಿದಂತೆ ಎರಡು ದಿನ ಜೋರು ಮಳೆ ಸುರಿಯಲಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೂ ವರ್ಷಧಾರೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?: ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿಯಲ್ಲಿ ಪ್ರವಾಹ ಆತಂಕ: ಬೆಂಗಳೂರಿನಲ್ಲಿ ಪ್ರವಾಹದ ಆತಂಕ ಇದೆ. ಈ ವಾರಾಂತ್ಯದವರೆಗೂ ಸಂಜೆಯ ಬಳಿಕ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯಲ್ಲೂ ವರುಣನ ಅಬ್ಬರ: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಮತ್ತು ಮೈಸೂರಿನಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಇದನ್ನೂ ಓದಿ: ಜಡಿಮಳೆಗೆ ನಲುಗಿದ ಬೆಂಗಳೂರಿನ ಬಡಾವಣೆಗಳು: ಎಲ್ಲೆಲ್ಲೂ ನೀರು, ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್