ಬೆಂಗಳೂರು: ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಬಂಧನ ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಿ.ಬಿ.ಐ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
ಮಾಜಿ ಕೇಂದ್ರ ಸಚಿವ ಚಿದಂಬರಂ ಸಿಬಿಐ ನವರು ಬಂಧಿಸಿರುವುದು ಖಂಡನೀಯ. ನಮ್ಮ ಪಕ್ಷದ ಶಿಸ್ತಿನ ಸಿಪಾಯಿ ಚಿದಂಬರಂ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿದರು.
ಅಮಿತ್ ಶಾ ಮಗನ ಆಸ್ತಿ ಕೇವಲ 4-5 ವರ್ಷಗಳಲ್ಲಿ ಹೆಚ್ಚಾಗಿದ್ದು ಹೇಗೆ? ಅಮಿತ್ ಶಾ ಅವರ ಮಗನ ಬಳಿ ಅಷ್ಟು ಹಣ ಎಲ್ಲಿ ಬಂತು ಅನ್ನೋದರ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದ್ರು.