ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಅಂತಿಮ ಕೀ ಉತ್ತರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಉತ್ತರಗಳನ್ನು ಪರಿಶೀಲಿಸಿಕೊಳ್ಳಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಪತ್ರಿಕೆ-1 ಮತ್ತು ಪತ್ರಿಕೆ-2ಕ್ಕೆ ಸಂಬಂಧಿಸಿದಂತೆ ಕೀ-ಉತ್ತರಗಳನ್ನು ದಿನಾಂಕ 09 ನವೆಂಬರ್ 2022 ರಂದು ಇಲಾಖಾ ವೆಬ್ ಸೈಟ್ https://schooleducation.kar.nic.in ನಲ್ಲಿ ಪ್ರಕಟಿಸಲಾಗಿತ್ತು. ಸದರಿ ಕೀ-ಉತ್ತರಗಳಿಗೆ ಆನ್‌ಲೈನ್ ಮೂಲಕ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು 10 ನವೆಂಬರ್ 2022 ರಿಂದ 17 ನವೆಂಬರ್ 2022 ರವರೆಗೆ ಕಾಲಾವಕಾಶ ನೀಡಲಾಗಿತ್ತು.
ಅಭ್ಯರ್ಥಿಗಳಿಂದ ನಿಗದಿತ ದಿನಾಂಕದೊಳಗೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ಪರಿಣಿತರ ಸಮಿತಿ (Subject Experts Committee) ಯಿಂದ ಪರಿಶೀಲಿಸಿದೆ. ಅದರಂತೆ ಅಂತಿಮ ಕೀ-ಉತ್ತರಗಳನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಶುಕ್ರವಾರ ಪ್ರಕಟಿಸಿದೆ. ಈ ಕುರಿತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡಿದ್ದು, ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಕೀ ಉತ್ತರದ ಜೊತೆ ತಾಳೆ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಓದಿ: ಟಿಇಟಿ ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್: ತಪ್ಪಿತಸ್ಥರ ವಿರುದ್ಧ ಕ್ರಮ- ಶಿಕ್ಷಣ ಇಲಾಖೆ