ಬೆಂಗಳೂರು: ಲಾಕ್ ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಕಿರುತೆರೆ ಕಾರ್ಮಿಕರು ಹಾಗೂ ಕಲಾವಿದರಿಗೆ ನೆರವಾಗಲು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮುಂದಾಗಿದೆ.
ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದರಿಂದ ಕಿರುತೆರೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಸಣ್ಣ ಕಲಾವಿದರು ಅರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕಾರ್ಮಿಕರು ಹಾಗೂ ಕಲಾವಿದರ ಕುಟುಂಬಗಳಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲುಅಸೋಸಿಯೇಷನ್ ತೀರ್ಮಾನಿಸಿದೆ.
ಈ ಬಗ್ಗೆ ಮಾತನಾಡಿರುವ ಅಸೋಸಿಯೇಶನ್ ಅಧ್ಯಕ್ಷ ಶಿವಕುಮಾರ್, ಈಗಾಗಲೇ ಸುಮಾರು 2500 ಮಂದಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ಅಗತ್ಯ ವಸ್ತುಗಳನ್ನು ನೀಡಿದ್ದೇವೆ ಎಂದಿದ್ದಾರೆ.