ETV Bharat / state

ರಾಜ್ಯದಲ್ಲಿ ಜುಲೈ 15ರವರೆಗೆ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - ಕರಾವಳಿ ಭಾಗದಲ್ಲಿ ಮಳೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಜುಲೈ 12ರಿಂದ 15ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

karnataka to receive heavy rain till july 15th
ರಾಜ್ಯದಲ್ಲಿ ಜುಲೈ 15ರವರೆಗೆ ಗುಡುಗು ಸಹಿತ ಮಳೆ
author img

By

Published : Jul 11, 2021, 6:38 PM IST

Updated : Jul 11, 2021, 6:44 PM IST

ಬೆಂಗಳೂರು: ಬಂಗಾಳ ಉಪಸಾಗರದ ಪಶ್ಚಿಮ ಭಾಗದ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 15ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಜುಲೈ 15ರವರೆಗೆ ಗುಡುಗು ಸಹಿತ ಮಳೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಜುಲೈ 12ರಿಂದ 15ರವರೆಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದ್ದು, ಜುಲೈ 15ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ, ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 12 ಸೆಂ.ಮೀ, ಉಡುಪಿ ಜಿಲ್ಲೆಯ ಕೋಟ, ಕುಂದಾಪುರದಲ್ಲಿ 10 ಸೆಂ.ಮೀ, ಮಂಗಳೂರಿನಲ್ಲಿ 9 ಸೆಂ.ಮೀ, ಕೊಡಗು ಜಿಲ್ಲೆಯ ಭಾಗಮಂಡಲ 7 ಸೆಂ.ಮೀ. ಮಳೆಯಾಗಿದೆ ಎಂದು ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

Last Updated : Jul 11, 2021, 6:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.