ಬೆಂಗಳೂರು: ರಾಜ್ಯದಲ್ಲಿಂದು 27,577 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದಾಗ, ಇದರಲ್ಲಿ 35 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,45,436 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವು 0.12% ರಷ್ಟಿದೆ. ಇತ್ತ 105 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 39,03,756 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 1585 ರಷ್ಟಿದೆ.
ಸೋಂಕಿಗೆ ಇಂದು ಒಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,053 ಏರಿಕೆ ಕಂಡಿದೆ. ಡೆತ್ ರೇಟ್ 2.85% ರಷ್ಟಿದೆ. ವಿಮಾನ ನಿಲ್ದಾಣದಿಂದ 1,947 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 25 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,81,573 ಕ್ಕೆ ಏರಿಕೆ ಆಗಿದೆ. 78 ಮಂದಿ ಡಿಸ್ಚಾರ್ಜ್ ಆಗಿದ್ದು ಈವರೆಗೆ 17,63,162ಏರಿಕೆ ಕಂಡಿದೆ. ಇಂದು ಯಾವುದೇ ಸಾವಿನ ವರದಿಯಾಗಿಲ್ಲ ಸದ್ಯ ಸಾವಿನ ಸಂಖ್ಯೆ 16,960 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,450 ರಷ್ಟಿದೆ.
ರೂಪಾಂತರಿ ವೈರಸ್ ಅಪ್ಡೇಟ್ಸ್:
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4620
ಇತರೆ- 311
ಒಮಿಕ್ರಾನ್- 3081
BAI.1.529- 828
BA1- 98
BA2- 2155
ಒಟ್ಟು- 8176