ETV Bharat / state

ಬೆಂಗಳೂರು-ಮಂಗಳೂರು ಪ್ರಯಾಣ ಇನ್ನು ಆಹ್ಲಾದಕರ.. ವಿಸ್ಟಾಡೋಮ್​ನಲ್ಲಿ ಸಂಚಾರಕ್ಕೆ ಮುಹೂರ್ತ ಫಿಕ್ಸ್ - Travel in Vistadome

ರೈಲ್ವೆ ಪ್ರಯಾಣಿಕರ ಬಹುನಿರೀಕ್ಷಿತ ವಿಸ್ಟಾಡೋಮ್​ ಪ್ರಯಾಣಕ್ಕೆ ದಿನಗಣನೆ ಶುರುವಾಗಿದೆ. ಜುಲೈ 7 ರಂದು ಯಶವಂತಪುರದಿಂದ ಹೊರಡುವ ರೈಲಿನಲ್ಲಿ ವಿಸ್ಟಾಡೋಮ್​ ಬೋಗಿಯನ್ನು ಅಳವಡಿಸಲಾಗಿದೆ.

ವಿಸ್ಟಾಡೋಮ್
ವಿಸ್ಟಾಡೋಮ್
author img

By

Published : Jul 3, 2021, 9:38 AM IST

ಬೆಂಗಳೂರು: ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಸಂಚರಿಸುವ ರೈಲಿನಲ್ಲಿ ಪ್ರಯಾಣಿಸುವವರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ಪ್ರಯಾಣಿಕರು ವಿಸ್ಟಾಡೋಮ್‌ ಕೋಚ್‌ನಲ್ಲಿ ಕುಳಿತು ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಕಣ್ತುಂಬಿಕೊಳ್ಳುವ ಕಾಲ ಕೊನೆಗೂ ಕೂಡಿ ಬಂದಿದೆ. ರೈಲು ಪ್ರಯಾಣದ ಬುಕ್ಕಿಂಗ್ ಇಂದಿನಿಂದ ಆರಂಭವಾಗಿದ್ದು, ಯಶವಂತಪುರದಿಂದ ಮಂಗಳೂರಿಗೆ 1,470 ರೂ. ದರ ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಕೃತಿ ಹಾಗೂ ಕಡಲತೀರದ ಸೌಂದರ್ಯದಿಂದಲೇ ಜನರನ್ನು ಆಕರ್ಷಿಸುವ ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗಗಳಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್‌ ಕೋಚ್‌ಗಳನ್ನು ಜೋಡಿಸಲಾಗಿದೆ.

ಮೊದಲ ರೈಲು ಯಶವಂತಪುರ-ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್‌ ಸ್ಪೆಷಲ್‌ ಜು.7ರಂದು ಯಶವಂತಪುರದಿಂದ ಹೊರಡಲಿದೆ. ಎರಡನೇ ರೈಲು ಯಶವಂತಪುರ-ಮಂಗಳೂರು ಜಂಕ್ಷನ್‌ ಎಕ್ಸ್‌ ಪ್ರೆಸ್‌ ಸ್ಪೆಷಲ್‌ ಜು. 8 ರಂದು ಯಶವಂತಪುರದಿಂದ ಹಾಗೂ ಮೂರನೇ ರೈಲು ಯಶವಂತಪುರ-ಮಂಗಳೂರು ಜಂಕ್ಷನ್‌-ಯಶವಂತಪುರ ಸ್ಪೆಷಲ್‌ ಎಕ್ಸ್‌ಪ್ರೆಸ್‌ ಜು.10 ರಂದು ಯಶವಂತಪುರದಿಂದ ಹೊರಡಲಿದೆ. ಈ ರೈಲುಗಳ ಸಂಚಾರದ ಮಾರನೇ ದಿನ ಮಂಗಳೂರು ಜಂಕ್ಷನ್‌ನಿಂದ ಯಶವಂತಪುರ ರೈಲು ನಿಲ್ದಾಣಕ್ಕೆ ಬರಲಿವೆ.

ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಪ್ರಯಾಣಿಕರು ಮನವಿ ಮಾಡಿದ್ದರು.

ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗಿರುವ ಈ ರೈಲುಮಾರ್ಗದಲ್ಲಿ ಸಂಚರಿಸುವರು ಶಿರಾಡಿ ಘಾಟ್ ಸೌಂದರ್ಯವನ್ನು ರೈಲಿನೊಳಗೆ ಕುಳಿತು ಕಣ್ತುಂಬಿಕೊಳ್ಳಬಹುದು. ಮಾರ್ಗ ಮಧ್ಯೆ ಕಾಣುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಸವಿಯಬಹುದು. ಮಳೆಗಾಲ ಕೂಡ ಆರಂಭವಾಗಿರುವುದರಿಂದ ಪ್ರಯಾಣಿಕರು ಸಖತ್ ಎಂಜಾಯ್ ಮಾಡಬಹುದುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.