ETV Bharat / state

ಕಾವೇರಿ: ಸಮಸ್ಯೆ ಬಗೆಹರಿಯುವವರೆಗೂ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಮೌನ ಧರಣಿ

ಗಾಂಧಿ ಜಯಂತಿಯ ಅಂಗವಾಗಿ ನಗರದ ಫ್ರೀಡಂ ಪಾರ್ಕ್​ನಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ರೈತ ಮುಖಂಡರು ಮೌನ ಧರಣಿ ನಡೆಸಿದರು.

ಕಾವೇರಿ ಹೋರಾಟ
ಕಾವೇರಿ ಹೋರಾಟ
author img

By ETV Bharat Karnataka Team

Published : Oct 2, 2023, 10:52 PM IST

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ತೀರ್ಪು ಖಂಡಿಸಿ ಹೋರಾಟ ಮುಂದುವರೆದಿದ್ದು, ಸಮಸ್ಯೆ ಬಗೆಹರಿಯುವ ತನಕ ಪ್ರತಿನಿತ್ಯ ಮೌನ ಧರಣಿ ಮುಂದುವರಿಸಲು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಾಗೂ ರೈತ ಮುಖಂಡ ಕುರುಬೂರು ಶಾಂತಕುಮಾರ್​ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ತೀರ್ಮಾನಿಸಿದೆ.

ಗಾಂಧಿ ಜಯಂತಿಯ ಅಂಗವಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ನಡೆದ ಮೌನ ಧರಣಿ ಬಳಿಕ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಸಂಘಟನೆಗಳು ಸರದಿಯಂತೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 'ಕಾವೇರಿ ನಮ್ಮದು' ಧರಣಿ ಸತ್ಯಾಗ್ರಹ ನಡೆಸಲಿವೆ. ಶಿಸ್ತುಬದ್ಧ ಹೋರಾಟದ ದೃಷ್ಟಿಯಿಂದ ನಾಲ್ವರನ್ನು, ಎಎಪಿ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್‌, ಹೋರಾಟಗಾರರಾದ ಗುರುದೇವ್‌ ನಾರಾಯಣ್‌, ಹತ್ತಳ್ಳಿ ದೇವರಾಜ್‌, ಕೆ. ಕೆ ಮೋಹನ್‌ ಅವರನ್ನು ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ.

ಧರಣಿಯ ವಿವರ:

- ಅಕ್ಟೋಬರ್ 3: ಕನ್ನಡ ಚಳುವಳಿ ಕೇಂದ್ರ ಸಮಿತಿ ಗುರುದೇವ್ ನಾರಾಯಣ್ ನೇತೃತ್ವದಲ್ಲಿ ಧರಣಿ

- ಅಕ್ಟೋಬರ್ 4: ಆಮ್ ಆದ್ಮಿ ಪಕ್ಷದ ವತಿಯಿಂದ ಚಳವಳಿ

- ಅಕ್ಟೋಬರ್ 5: ಜಯ ಕರ್ನಾಟಕ ಜನಪರ ವೇದಿಕೆ ಜೈ ಶ್ರೀನಿವಾಸ್ ನೇತೃತ್ವದಲ್ಲಿ ಹೋರಾಟ

- ಅಕ್ಟೋಬರ್ 6: ಕನ್ನಡ ಪಕ್ಷದ ಪುರುಷೋತ್ತಮ್ ನೇತೃತ್ವದಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ

- ಅಕ್ಟೋಬರ್ 8: ರಾಜ್ಯ ಕಬ್ಬು ಬೆಳೆಗಾರ ಸಂಘ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಸತ್ಯಾಗ್ರಹ

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ : ಸಕ್ಕರೆನಾಡು ಮಂಡ್ಯದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕಿಚ್ಚು ಆರುವ ಲಕ್ಷಣಗಳು ಕಾಣುತ್ತಿಲ್ಲ. ಭಾನುವಾರ (ಅಕ್ಟೋಬರ್ -1-2023) ಕೂಡ ರೈತಪರ ಸಂಘಟನೆಗಳು ವಿನೂತನವಾಗಿ ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಕಾವೇರಿ ನದಿಗೆ ಎಳ್ಳು, ಜೀರಿಗೆ ಬಿಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಶ್ರೀರಂಗಪಟ್ಟಣದ ಕುವೆಂಪು ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಮತ್ತೊಂದೆಡೆ, ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ನಡೆಸುತ್ತಿರುವ ಧರಣಿಯೂ ಮುಂದುವರೆದಿತ್ತು. ಭೋವಿ ಸಮಾಜದ ಮುಖಂಡರು ಸೇರಿದಂತೆ ಹಲವಾರು ಸಂಘಟನೆಗಳು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದವು.

ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವವರೆಗೂ ಯಾವುದೇ ಕಾರಣಕ್ಕೂ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆ ಮಾಡಲು ಬಿಡುವುದಿಲ್ಲ. ನಮ್ಮನ್ನು ಬಂಧಿಸಿದರೂ ಕೂಡ ಸಂಘಟನೆಗಳು ಒಮ್ಮತದಿಂದ ಇದ್ದೇವೆ. ಈ ಹಿಂದೆ ನಮ್ಮ ಸಂಘಟನೆಗಳೇ ಸೇರಿಕೊಂಡು ದಸರಾ ಮಾಡಿರುವಂತೆ ಮತ್ತೊಮ್ಮೆ ಮಾಡುತ್ತೇವೆ. ಹೋರಾಟ ಮಾತ್ರ ನಿಲ್ಲಿಸುವುದಿಲ್ಲ ಎಂದು ರೈತ ಮುಖಂಡ ಕೃಷ್ಣೇಗೌಡ ಎಚ್ಚರಿಕೆ ನೀಡಿದ್ದರು.

ತಮಿಳುನಾಡಿಗೆ ಕಾವೇರಿ ನೀರನ್ನು ರಾಜ್ಯ ಸರ್ಕಾರ ಕದ್ದು ಮುಚ್ಚಿ ಬಿಟ್ಟಿರುವುದನ್ನು ಖಂಡಿಸಿ ಕಾವೇರಿ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನೆ ವೇದಿಕೆಗೆ ನಮ್ಮ ಭೋವಿ ಸಮಾಜದವರು ಬಂದು ನಾವು ಹೋರಾಟ ಮಾಡಿದ್ದೇವೆ. ಇನ್ನು ಮುಂದೆಯೂ ಸಹ ನೀರು ನಿಲ್ಲುವವರೆಗೂ ಹೋರಾಟಕ್ಕೆ ಬೆಂಬಲ ಕೊಡುತ್ತೇವೆ ಎಂದು ಬೋವಿ ಸಮಾಜದ ಅಧ್ಯಕ್ಷ ಗುರುವಪ್ಪ ಹೇಳಿದ್ದರು.

ಇದನ್ನೂ ಓದಿ: ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ: ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಚಿಕ್ಕೋಡಿ ಕರವೇ ಕಾರ್ಯಕರ್ತರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.