ಬೆಂಗಳೂರು: ಕರಾವಳಿಯ ಬಹುತೇಕ ಕಡೆಗಳು ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವುದು ಬಿಟ್ಟರೆ ರಾಜ್ಯದ ಉಳಿದೆಡೆಗಳಲ್ಲಿ ನೈಋತ್ಯ ಮುಂಗಾರು ಮಳೆ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಕರಾವಳಿಯ ಬಹುತೇಕ ಭಾಗಗಳು, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಜುಲೈ 23ರ ವರೆಗೆ(ನಾಳೆ) ಈ ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಇಂದು ಹಗುರ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ. 2 ದಿನ ಮುಂದುವರೆಯುವ ಸಾಧ್ಯತೆಯೂ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಮಡಿಕೇರಿ: ಭೂಮಿಯಿಂದ ಕೇಳಿಬಂದ ಭಾರಿ ಪ್ರಮಾಣದ ಶಬ್ದ, ನಿಶಾನಿ ಬೆಟ್ಟದಲ್ಲಿ ಬಿರುಕು