ETV Bharat / state

ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್​ - ಕರ್ನಾಟಕ ಹವಾಮಾನ ಇಲಾಖೆ ವರದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆ ಆಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಅ. 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎಂದೂ ಹವಾಮಾನ ಇಲಾಖೆ ಹೇಳಿದೆ.

Karnataka weather report today
ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್​
author img

By

Published : Oct 24, 2021, 9:48 AM IST

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ. 26ರಂದು ಪೂರ್ಣ ಪ್ರಮಾಣದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆ ಆಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಅ. 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎಂದೂ ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ:

ರಾಜ್ಯದಲ್ಲಿ ಮುಂದಿನ 4-5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಮಳೆ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮುಂದಿನ 24 ಗಂಟೆ ಗುಡುಗು ಸಹಿತ ಭಾರಿ ಮಳೆ:

ಮುಂದಿನ 24 ಗಂಟೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿ ಜಿಲ್ಲಿಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: 'ಮೂಢನಂಬಿಕೆಗೆ ಯಾವುದೇ ಅರ್ಥವಿಲ್ಲ, ಅಧಿಕಾರ ಹೋದ್ರೆ ಚೆನ್ನಮ್ಮನ ಸಲುವಾಗಿ ಹೋಯ್ತೆಂದು ಸಂತೋಷ ಪಡುವೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.