ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದೆ. ಉಡುಪಿಯ ಕೊಲ್ಲೂರಿನಲ್ಲಿ 10 ಸೆಂ.ಮೀ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞರಾದ ಸಿ.ಎಸ್ ಪಾಟೀಲ್ ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ, ಅಂದರೆ 6 ರಿಂದ 10 ನೇ ತಾರೀಖಿನವರೆಗೆ ಹಗುರದಿಂದ ಸಾಧಾರಣವಾಗಿ, ಹಾಗೂ ಕೆಲವಡೆ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಮುಂದಿನ ಐದು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.
ಉತ್ತರ ಒಳನಾಡಿನ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. 7 ಹಾಗೂ 8 ನೇ ತಾರೀಕಿಗೆ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಹಾಗೂ ಜುಲೈ 9 ರಿಂದ 10 ರಂದು ಬೆಳಗಾವಿ, ಧಾರವಾಡಕ್ಕೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿದರು.
ಇಂದು ಹಾಗೂ ನಾಳೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ. 9-10 ನೇ ತಾರೀಕಿಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದರು.