ಬೆಂಗಳೂರು: ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈಗಾಗಲೇ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾಗಮಂಡಲದಲ್ಲಿ 4 ಸೆಂ.ಮೀ, ಕಾರವಾರದಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 37.4, ಬಾಗಲಕೋಟೆ 34.2, ಮೈಸೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ತೌಕ್ತೆ ತಣ್ಣಗಾದರೂ ನಿಲ್ಲದ ಅಲೆಗಳ ಆರ್ಭಟ : ಗೋಕರ್ಣದಲ್ಲಿ ಕಡಲ್ಕೊರೆತ
ಮೇ 18 ರಿಂದ ಮೇ 22 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉ.ಒಳನಾಡು ಹಾಗೂ ದ.ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.