ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೆ ಸುಳಿಗಾಳಿಯಿಂದ ರಾಜ್ಯದ ವಿವಿಧೆಡೆ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನವರಿ ಇಂದು ಮತ್ತು ನಾಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಪ್ರಭಾವ ಕಡಿಮೆಯಿದೆ. ಶುಕ್ರವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಕೊಡಗು ಸೇರಿ ಕೆಲವಡೆ ರಾತ್ರಿ ಚದುರಿದಂತೆ ಸಾಧಾರಣ ಮಳೆ ಬಿದ್ದಿದೆ ಎಂದು ಇಲಾಖೆಯು ಮಾಹಿತಿ ನೀಡಿದೆ.
ಇದನ್ನೂ ಓದಿ: ನಿಯಮ ಉಲ್ಲಂಘಿಸಿ ನ್ಯೂ ಇಯರ್ ಪಾರ್ಟಿ - ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ 8 ಮಂದಿ ಅಂದರ್!