ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಲ್ಕೈದು ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಒಟ್ಟು 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ. ಅಕ್ಟೋಬರ್ 20ರಿಂದ 22ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಚಳಿ ಹೆಚ್ಚಳ: ರಾಜಧಾನಿಯಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗಲಿದೆ. ಹಂತ ಹಂತವಾಗಿ ಚಳಿ ಪ್ರಮಾಣ ಕೂಡ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮುಂದುವರೆದ ಮಳೆ: ಕೆರೆ ಕಟ್ಟೆ ಒಡೆದು ಬೆಳೆ ಹಾನಿ, ಅನ್ನದಾತ ಕಂಗಾಲು