ETV Bharat / state

ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯಾಗಿ ಘೋಷಿಸಿ : ಕುರುಬರ ಸಂಘ ಒತ್ತಾಯ - ಈಟಿವಿ ಭಾರತ್ ಕನ್ನಡ ಸುದ್ದಿ

ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್​ ಸಿಎಂ ಹುದ್ದೆ ಕೊಡಬೇಕು ಎಂದು ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್​ ಮೂರ್ತಿ ಅವರು ಒತ್ತಾಯಿಸಿದ್ದಾರೆ.

ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್​ ಮೂರ್ತಿ

author img

By

Published : May 16, 2023, 6:16 PM IST

ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್​ ಮೂರ್ತಿ

ಬೆಂಗಳೂರು : ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯಾಗಿ ಮಾಡುವಂತೆ ಕರ್ನಾಟಕ ಕುರುಬರ ಸಂಘ ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿದೆ.

ಆನಂದರಾವ್ ವೃತ್ತದ ಬಳಿಯ ಖಾಸಗಿ ಹೋಟೆಲ್​ನಲ್ಲಿಂದು ಮಾಧ್ಯಮಗೋಷ್ಟಿ ನಡೆಸಿದ ಕುರುಬರ ಸಂಘ ಸಿದ್ದರಾಮಯ್ಯರಿಗೆ ಸಿಎಂ ಪಟ್ಟ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಅನ್ನು ಆಗ್ರಹಿಸಿತು. ಈ ವೇಳೆ ಮಾತನಾಡಿದ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ರಾಜ್ಯದ ಸಿಎಂ ಹುದ್ದೆಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಸ್ಪರ್ಧೆ ಇದೆ. ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸಿಎಂ ಹುದ್ದೆ ಕೊಡಬೇಕು. ಕುರುಬ ಸಮುದಾಯದ 90% ಜನರು ಕಾಂಗ್ರೆಸ್​ಗೆ ಮತ ಹಾಕಿದ್ದಾರೆ. ಇದು ಸಿದ್ದರಾಮಯ್ಯರಿಗೆ ಕಡೆಯ ಚುನಾವಣೆ ಆಗಿದೆ. ಅವರಿಗೆ 13 ಬಾರಿ ಬಜೆಟ್ ಮಂಡಿಸಿದ ಅನುಭವ ಇದೆ. ಸಿದ್ದರಾಮಯ್ಯರನ್ನು ಸಿಎಂ ಆಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್​ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಕುರುಬರು 90% ಕಾಂಗ್ರೆಸ್, ಸಿದ್ದರಾಮಯ್ಯರನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್​ಗೆ ಹೆಚ್ಚು ಸ್ಥಾನ ಬರಲು ಕುರುಬರು ಕಾರಣರಾಗಿದ್ದಾರೆ. ಸಿದ್ದರಾಮಯ್ಯರು ಸಿಎಂ ಆಗ್ತಾರೆ. ಹಾಗಾಗಿ ಕಾಂಗ್ರೆಸ್​ಗೆ ಟಿಕೆಟ್ ನೀಡುವಂತೆ ಸಮುದಾಯದವರ ಬಳಿ ಮತಯಾಚನೆ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್​ಗೆ 135 ಸ್ಥಾನ ಬಂದಿದೆ. ಸಿದ್ದರಾಮಯ್ಯರನ್ನು ಸಿಎಂ ಮಾಡಲೇಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದರು. ಈಗ ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗಬೇಕು. 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾಗಿ ಅವರು ಆರ್ಥಿಕ ತಜ್ಞರಾಗಿದ್ದಾರೆ. ಗ್ಯಾರಂಟಿಗಳನ್ನು ಅವರು ಬಂದರೆ ಈಡೇರಿಸುತ್ತಾರೆ ಎಂದು ಕುರುಬ ನಾಯಕರು ಆಗ್ರಹಿಸಿದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ಅರ್ಹ ವ್ಯಕ್ತಿ: ಯಾವುದೇ ಭ್ರಷ್ಟಾಚಾರವಿಲ್ಲದೆ ಕಳಂಕ ರಹಿತವಾಗಿ ಸರ್ವರಿಗೂ ಸಮಪಾಲು ಎಂಬ ಸೂತ್ರದಡಿಯಲ್ಲಿ ರಾಜ್ಯವನ್ನಾಳಿದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ಅರ್ಹ ವ್ಯಕ್ತಿಯಾಗಿರುತ್ತಾರೆ. ಅವರು ಆಡಳಿತದ ಅವಧಿಯಲ್ಲಿ ಮೇಲು- ಕೀಳು ಎನ್ನದೆ ರಾಜ್ಯದ ಸರ್ವರಿಗೂ ಸಾಮಾಜಿಕ ನ್ಯಾಯ ತತ್ವದ ಅಡಿಯಲ್ಲಿ ಯೋಜನೆಗಳನ್ನು ರೂಪಿಸಿ ಅರ್ಹ ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ನೀಡಿರುತ್ತಾರೆ.

ಸಿದ್ದರಾಮಯ್ಯರವರು 2013-18 ಮುಖ್ಯಮಂತ್ರಿಗಳಾಗಿ ನೀಡಿದ ಕಾರ್ಯಕ್ರಮಗಳನ್ನು ಮುಂದುವರೆಸಲು ಹಾಗೂ ಈಗಿನ ಚುನಾವಣೆಯಲ್ಲಿ ನೀಡಿರುವ ಪ್ರಣಾಳಿಕೆಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಮತ್ತೊಮ್ಮೆ ಇವರನ್ನೇ ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಬೇಕಾಗಿದೆ ಎಂದು ಮನವಿ ಸಲ್ಲಿಸಿದ್ದಾರೆ.

ಸಾಮಾಜಿಕ ನ್ಯಾಯದಡಿ ಆಡಳಿತ ನೀಡಲು ಸಿದ್ದರಾಮಯ್ಯ ಸಮರ್ಥ: 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಭ್ರಷ್ಟಾಚಾರದ ಬಿಜೆಪಿ ಪಕ್ಷವನ್ನು ಎದುರಿಸಲು ಹಾಗೂ ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯದಡಿ ಆಡಳಿತವನ್ನು ನೀಡಲು ಸಿದ್ದರಾಮಯ್ಯರವರು ಸಮರ್ಥರಾಗಿದ್ದು, ಇವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ಗೆಲ್ಲಿಸಿದ ಗ್ಯಾರಂಟಿ ಕಾರ್ಡ್​.. ಹೊಸ ಸರ್ಕಾರಕ್ಕೆ ಉಚಿತ ಯೋಜನೆಗಳ ಜಾರಿಗೆ ಎದುರಾಗಲಿದೆ ಹತ್ತಾರು ಸವಾಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.