ETV Bharat / state

ಕರ್ತವ್ಯಕ್ಕೆ ಅಡ್ಡಿ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ: ಕೆಎಎಸ್ ಅಧಿಕಾರಿಗಳಿಂದ ಧರಣಿ - KAS officers protest near Mahatma Gandhi Statue of vidhanasouda

ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕೆಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸಿದರು. ಬಳಿಕ ಅವರ ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದರು.

KAS officers who protest infront of the vidhana souda
ಧರಣಿ ನಡೆಸಿದ ಕೆಎಎಸ್ ಅಧಿಕಾರಿಗಳು
author img

By

Published : Feb 1, 2022, 6:07 PM IST

Updated : Feb 1, 2022, 7:07 PM IST

ಬೆಂಗಳೂರು: ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿಗಳಿಗೆ ಕೆಲಸ ಮಾಡಲು ಅಡ್ಡಿಯುಂಟು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ, ತಮಗೆ ರಕ್ಷಣೆ ನೀಡಬೇಕೆಂದು ಕೆಎಎಸ್ ಅಧಿಕಾರಿಗಳ ಸಂಘದ ಸದಸ್ಯರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮಂಗಳವಾರ ಸಾಂಕೇತಿಕವಾಗಿ ಧರಣಿ ನಡೆಸಿದ್ದಾರೆ.

ಕೆಎಎಸ್ ಅಧಿಕಾರಿಗಳಿಂದ ಧರಣಿ

ನಂತರ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಲ್ಲಿಸಿದರು. ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಗಳಾದ ನಾವು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಹುಮುಖ್ಯವಾಗಿ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಉಪ ವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳು, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಾಗೂ ಸರ್ಕಾರದ ಎಲ್ಲ ಜವಾಬ್ದಾರಿಯುತ ಕೆಲಸಗಳನ್ನು ನಿರ್ವಹಿಸುತ್ತಿದ್ದೇವೆ.

ಇದನ್ನೂ ಓದಿ: ಮಂಗಳೂರಿನ ಜ್ಯೋತಿ ಚಿತ್ರಮಂದಿರ ನೆಲಸಮ.. ಇತಿಹಾಸದ ಪುಟ ಸೇರಿದ ಟಾಕೀಸ್​

ಕೋವಿಡ್​ ನಿಯಂತ್ರಣ ಹಾಗೂ ನಿರ್ವಹಣೆಗೆ ಸಂಬಂಧಪಟ್ಟಂತೆ ಮತ್ತು ಅತಿವೃಷ್ಟಿ ಹಾಗೂ ಅನಾವೃಷ್ಠಿಯಿಂದಾಗಿ ಪ್ರಾಣ, ಬೆಳೆ ಹಾಗೂ ಮನೆ ಹಾನಿಗಳಿಗೆ ಸಂಬಂಧಪಟ್ಟಂತೆ ಎಲ್ಲಾ ತುರ್ತು ಪರಿಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿಗಳಾಗಿ ತುಂಬಾ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಿದ್ದೇವೆ. ಆದರೆ ಇತ್ತೀಚೆಗೆ ನಡೆದಂತಹ ಕೆಲವು ಘಟನೆಗಳಿಂದಾಗಿ ಅಧಿಕಾರಿಗಳಿಗೆ ಹಾಗೂ ಕಂದಾಯ ಇಲಾಖೆಯ ನೌಕರರಿಗೆ ಆಡಳಿತದ ಜವಾಬ್ದಾರಿಯುತ ಕೆಲಸ ನಿರ್ವಹಣೆಗೆ ಧಕ್ಕೆ ಬರುವಂತ ಸನ್ನಿವೇಶ ಉಂಟಾಗಿದೆ. ಈ ಘಟನೆಯಿಂದಾಗಿ ಎಲ್ಲಾ ನೌಕರರು ಆತಂಕಕ್ಕೆ ಒಳಗಾಗಿ ಒಂದು ರೀತಿಯ ಭಯದ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ತಮಗೆ ರಕ್ಷಣೆ ನೀಡಬೇಕು ಎಂದು ಅಧಿಕಾರಿಗಳು ಒತ್ತಾಯಿಸಿದರು.

ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರ ಮೇಲೆ ಆಗಿಂದಾಗ್ಗೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳಿಗೆ ಕಠಿಣ ಕಾನೂನು ರೂಪಿಸಬೇಕು. ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಯುತ್ತಿದ್ದು, ಹಲ್ಲೆ ನಡೆಸುವವರ ಮೇಲೆ ಸರ್ಕಾರ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಅಧಿಕಾರಿಗಳು ಒತ್ತಾಯಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Feb 1, 2022, 7:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.