ಬೆಂಗಳೂರು: ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಕರ್ನಾಟಕದ ಪರವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ತಂಡ ಭಾಗಿಯಾಗಿದೆ.
ಕೇಂದ್ರ ಸಚಿವರುಗಳಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಡಾ.ಸಿ.ಎನ್.ಅಶ್ವಥ್ ನಾರಾಯಣ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಸಿ.ಪಿ.ಯೋಗೀಶ್ವರ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಪಕ್ಷದ ಸಾಂಸ್ಥಿಕ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯದ 37 ಸಂಘಟನಾತ್ಮಕ ಜಿಲ್ಲೆಗಳಲ್ಲಿ 20 ಸಂಘಟನಾತ್ಮಕ ಜಿಲ್ಲೆಗಳಿಗೆ ಜನವರಿ 12 ರಂದು ಜಿಲ್ಲಾಧ್ಯಕ್ಷರ ಚುನಾವಣೆ ನಡೆದಿದ್ದು ಎಲ್ಲಾ 20 ಜಿಲ್ಲೆಗಳಿಗೆ ಅಧ್ಯಕ್ಷರ ಅವಿರೋಧ ಆಯ್ಕೆ ನಡೆದಿತ್ತು.
ನಂತರ ಜನವರಿ 16 ರಂದು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಹಂಗಾಮಿ ಅಧ್ಯಕ್ಷರಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವಿರೋಧವಾಗಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿ ಅಂದೇ ಅಧಿಕಾರ ಸ್ವೀಕಾರ ಮಾಡಿದ್ದು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.