ETV Bharat / state

ಭಯೋತ್ಪಾದಕ ಕೃತ್ಯ ನಡೆಸಲು ಯತ್ನಿಸಿದವರ ವಿರುದ್ಧ ಕ್ರಮ: ಕಟೀಲ್

ಮಂಗಳೂರಿನ ಬಾಂಬ್ ಸ್ಪೋಟದ ತನಿಖೆ ಮುಂದುವರೆದಿದ್ದು, ಭಯೋತ್ಪಾದಕ ಕೃತ್ಯ ನಡೆಸಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

BJP State President Nalin Kumar Kateel
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
author img

By

Published : Nov 20, 2022, 5:16 PM IST

ಬೆಂಗಳೂರು: ಕೇಂದ್ರ ಸರಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (NIA) ಮಂಗಳೂರಿನ ಬಾಂಬ್ ಸ್ಫೋಟದ ತನಿಖೆ ನಡೆಸಲಿದ್ದು, ಇದರ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ನೆರವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ‌ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಬಾಂಬ್ ಸ್ಫೋಟದ ಹಿಂದೆ ಅಂತಾರಾಜ್ಯ ದೇಶದ್ರೋಹಿಗಳ ಕೈವಾಡ ಪತ್ತೆ ಹಚ್ಚಲು NIA ಕಾರ್ಯತತ್ಪರವಾಗಿದೆ. ನಮ್ಮ ಉನ್ನತ ಪೊಲೀಸ್ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಕರ್ನಾಟಕದಲ್ಲಿ ಭಯೋತ್ಪಾದಕ ಕೃತ್ಯ ಎಸಗುವ ಮೂಲಕ ರಾಜ್ಯಕ್ಕೆ ಕೆಟ್ಟ ಹೆಸರು ತರುವ ಮತಾಂಧರ ಪ್ರಯತ್ನ ಯಶಸ್ಸು ಕಾಣಲು ಬಿಡುವುದಿಲ್ಲ. ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ. ಕರ್ನಾಟಕದಲ್ಲಿ ನಮ್ಮ ಪೊಲೀಸ್ ಇಲಾಖೆ ಮಂಗಳೂರಿನ ಸ್ಫೋಟದ ಮೂಲ ಪತ್ತೆಹಚ್ಚುವಲ್ಲಿ ನಿರತವಾಗಿದ್ದು, ಕೇಂದ್ರದಿಂದ ಅಗತ್ಯ ನೆರವು ನೀಡಲಾಗಿದೆ. ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. ಮೂಲಭೂತವಾದಿಗಳ ಇಂತಹ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಅಥವಾ ನೆರವು ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.