ETV Bharat / state

ಕಾಂಗ್ರೆಸ್​​ನವರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ: ಕಟೀಲ್ ತಿರುಗೇಟು - ಬೆಂಗಳೂರು

ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್​​ ಮೂಲಕ ತಿರುಗೇಟು ನೀಡಿದ್ದು, ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ ಎಂದಿದ್ದಾರೆ.

ಕಟೀಲ್ ತಿರುಗೇಟು
ಕಟೀಲ್ ತಿರುಗೇಟು
author img

By

Published : Jul 24, 2020, 8:17 AM IST

ಬೆಂಗಳೂರು: ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಜಾಮೀನು ಪಡೆದು ಹೊರಗಿದ್ದಾರೆ.‌ ಅವರೆಲ್ಲ ಜಾಮೀನು ಪಡೆಯುವ ಸ್ಥಿತಿ ಯಾಕೆ ಬಂತು ಎಂಬುದನ್ನೂ ಜನರಿಗೆ ಹೇಳಲಿ ಎಂದು ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ‌.

ಕಾಂಗ್ರೆಸ್ ನಾಯಕರು ವೈದ್ಯಕೀಯ ಪರಿಕರ ಖರೀದಿ ಅವ್ಯವಹಾರದ ಆರೋಪ ಮಾಡಿ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡುತ್ತಿದ್ದಂತೆ ಸರಣಿ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಕೈ ನಾಯಕರನ್ನು ಟೀಕಿಸಿದರು.

ಕೊರೊನಾ ಸಂದರ್ಭದಲ್ಲಿ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವನ್ನು ನಾವು ಜನಪ್ರತಿನಿಧಿಗಳು ಮಾಡಬೇಕಿದೆ. ಅದು ಬಿಟ್ಟು ಕಾಂಗ್ರೆಸ್​​​​ನವರು ರಾಜಕಾರಣ ಮಾಡಲು ಹೊರಟಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ‌ ಜನರನ್ನು ಆತಂಕಕ್ಕೀಡು ಮಾಡುವ ಕೆಲಸವನ್ನು ಮೊದಲು ನಿಲ್ಲಿಸಲಿ. ಎಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧದ ಸಮರ ಗೆಲ್ಲುವುದು ನಮ್ಮೆಲ್ಲರ ಗುರಿಯಾಗಲಿ ಎಂದು ಸಲಹೆ ನೀಡಿದ್ದಾರೆ.

  • ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಜಾಮೀನು ಪಡೆದು ಹೊರಗಿದ್ದಾರೆ.‌ ಅವರೆಲ್ಲ ಜಾಮೀನು ಪಡೆಯುವ ಸ್ಥಿತಿ ಯಾಕೆ ಬಂತು ಎಂಬುದನ್ನೂ ಜನರಿಗೆ ಹೇಳಿ @siddaramaiah ಅವರೆ.

    — Nalinkumar Kateel (@nalinkateel) July 23, 2020 " class="align-text-top noRightClick twitterSection" data=" ">

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಅನುಮಾನಗಳಿದ್ದರೆ ಬಗೆಹರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರೂ ಕಾಂಗ್ರೆಸ್ ನಾಯಕರು ಮತ್ತದೇ ಆರೋಪಗಳನ್ನು ಮಾಡಿದ್ದಾರೆ. ಕೊರೊನಾದಿಂದ ಹಾದಿಬೀದಿಯಲ್ಲಿ ಜನ ಸಾಯುತ್ತಿದ್ದಾರೆ ಎಂದು ಹಸಿ ಸುಳ್ಳು ಹೇಳಿ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ ನಡೆಸಿದ್ದು, ತುರ್ತು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಕಟೀಲ್ ಟಾಂಗ್ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.