ETV Bharat / state

ಕವಾಡಿಗರಹಟ್ಟಿ ಕಲುಷಿತ ನೀರು ಸೇವನೆ ಪ್ರಕರಣ: ಮೂವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

Contaminated water consumption case: ಚಿತ್ರದುರ್ಗದ ಕವಾಡಿಗರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆಗೊಂಡಿದೆ.

author img

By

Published : Aug 5, 2023, 7:09 AM IST

kavadigarhatti-contaminated-water-case-5-lakh-compensation-by-govt
ಕವಾಡಿಗರಹಟ್ಟಿ ಕಲುಷಿತ ನೀರು ಸೇವನೆ ಪ್ರಕರಣ: 3 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿ ಗ್ರಾಮದ ಎಸ್​ಸಿ ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಕಲುಷಿತ ನೀರು ಸೇವನೆಯಿಂದ ಶುಕ್ರವಾರವೂ ಇಬ್ಬರೂ ಅಸುನೀಗಿದ್ದು, ಒಟ್ಟೂ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆ ಆಗಿದೆ.

ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ನೀಡಿದ ಸೂಚನೆ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳಂತೆ ಪರಿಹಾರ ಮಂಜೂರು ಮಾಡಿ, ಜಿಲ್ಲಾಧಿಕಾರಿಗೆ ಒಟ್ಟು 15 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.

ಜುಲೈ 31ರಂದು ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿ ಎಸ್​ಸಿ ಕಾಲೋನಿಯಲ್ಲಿ ಕುಡಿಯುವ ನೀರು ಕಲುಷಿತಗೊಂಡಿದ್ದರಿಂದ ಅಲ್ಲಿನ ನಿವಾಸಿಗಳು ಅಸ್ವಸ್ಥಗೊಂಡು ಮೂವರು ಮೃತಪಟ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಹಾಗೂ ಜಿಲ್ಲಾಧಿಕಾರಿಗಳು ಸಲ್ಲಿಸಿದ ವರದಿಯನ್ನು ಆಧರಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.

ಕವಾಡಿಗರಹಟ್ಟಿಯ ಮಂಜುಳಾ, ರಘು ಆಗಸ್ಟ್​ 1ರಂದು ಹಾಗೂ ವಡ್ಡರ ಸಿದ್ಧವ್ವನಹಳ್ಳಿಯ ಪ್ರವೀಣ್ ಆಗಸ್ಟ್​​ 2ರಂದು ಮೃತಪಟ್ಟಿದ್ದರು. ಇದಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ನಲ್ಲಿ ನೀರು ಪರೀಕ್ಷೆಗೆ ಕಳಿಸಲಾಗಿದೆ. ಕುಡಿಯುವ ನೀರಿನಲ್ಲಿ ಉದ್ದೇಶಪೂರ್ವಕವಾಗಿ ವಿಷ ಬೆರೆಸಲಾಗಿದೆ ಎಂಬುದು ಸ್ಥಳೀಯರ ಆರೋಪವಾಗಿತ್ತು. ಈ ಸಂಬಂಧ ಲ್ಯಾಬ್​ ವರದಿಯು ಗುರುವಾರ ಬಂದಿದ್ದು, ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನೀರಿನಲ್ಲಿ ಕಾಲರಾ ಮಾದರಿ ಅಂಶ ಇದೆ ಎಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಘಟಕ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರುವುದು ಬಾಕಿ ಇದೆ.

ಐವರ ಅಮಾನತು: ಪ್ರಕರಣ ಸಂಬಂಧ ಈಗಾಗಲೇ ಕಾರ್ಯಪಾಲಕ ಅಭಿಯಂತರ (ಎಇಇ) ಆರ್. ಮಂಜುನಾಥ ಗಿರಡ್ಡಿ ಮತ್ತು ಕಿರಿಯ ಅಭಿಯಂತರ (ಜೆಇ) ಎಸ್.ಆರ್. ಕಿರಣ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಸೂಚನೆ ನೀಡಿದ್ದಾರೆ. ಜೊತೆಗೆ, ಕವಾಡಿಗರಹಟ್ಟಿಯಲ್ಲಿ ವಾಲ್ವ್ ಆಪರೇಟರ್ ಆಗಿದ್ದ ಸಿ.ಹೆಚ್. ಪ್ರಕಾಶ್ ಬಾಬು ಅವರನ್ನೂ ಅಮಾನತು ಮಾಡಲಾಗಿದೆ. ನಗರಸಭೆ ಪೌರಾಯುಕ್ತ ಶ್ರೀನಿವಾಸ್​ಗೆ ಶೋಕಾಸ್ ನೋಟಿಸ್ ನೀಡಿದ್ದು, ಗುತ್ತಿಗೆ ಆಧಾರಿತ ನೌಕರ ನೀರಗಂಟಿ ಸುರೇಶ್ ಅವರನ್ನು ಕೆಲಸದಿಂದ ವಜಾ ಮಾಡಿ ಆದೇಶ ಹೊರಡಿಸಲಾಗಿದೆ. ಒಟ್ಟಾರೆ, ಓರ್ವ ಗುತ್ತಿಗೆ ನೌಕರ ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಕವಾಡಿಗರಹಟ್ಟಿ ಕಲುಷಿತ ನೀರು ಸೇವನೆ ಪ್ರಕರಣ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ, ಗುತ್ತಿಗೆ ನೌಕರ ಸೇರಿ ಐವರ ಅಮಾನತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.