ETV Bharat / state

'ಕಾವೇರಿ ಕೂಗು ಯೋಜನೆ'ಗೆ ಒಪ್ಪಿಗೆ ನೀಡಿಲ್ಲ: ಹೈಕೋರ್ಟ್‌ಗೆ ಸರ್ಕಾರದ ಸ್ಪಷ್ಟನೆ

ಕಾವೇರಿ ಕೂಗು ಅಭಿಯಾನದ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸುತ್ತಿರುವುದನ್ನು ಪ್ರಶ್ನಿಸಿ ವಕೀಲ ವಿ.ವಿ. ಅಮರನಾಥನ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ, ಯೋಜನೆಗೆ ಒಪ್ಪಿಗೆ ನೀಡಿಲ್ಲ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Jul 22, 2020, 5:56 PM IST

ಬೆಂಗಳೂರು: ಕಾವೇರಿ ಕೂಗು ಅಭಿಯಾನ ಯೋಜನೆಗೆ ನಾವು ಯಾವುದೇ ಒಪ್ಪಿಗೆ ನೀಡಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ.

ಈ ಅಭಿಯಾನದ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸುತ್ತಿರುವುದನ್ನು ಪ್ರಶ್ನಿಸಿ ವಕೀಲರಾದ ವಿ.ವಿ. ಅಮರನಾಥನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಸ್ಪಷ್ಟನೆ ನೀಡಲಾಗಿದೆ.

ರಾಜ್ಯ ಸರ್ಕಾರದ ಪರ ವಕೀಲರು ಪೀಠಕ್ಕೆ ಲಿಖಿತ ಮಾಹಿತಿ ನೀಡಿ, ಯೋಜನೆ ರೂಪಿಸಿರುವ ಈಶ ಸಂಸ್ಥೆಯವರು ಅನುಮತಿ ಕೇಳಿ ಕಳೆದ 2019 ಆಗಸ್ಟ್​ನಲ್ಲಿ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ

ನದಿ ತಪ್ಪಲಿನ ಪ್ರದೇಶಗಳಲ್ಲಿ ರೈತರ ಸಹಯೋಗದೊಂದಿಗೆ ಗಿಡ ನೆಡಲು ಅರಣ್ಯ ಇಲಾಖೆ ರೂಪಿಸಿರುವ ಯೋಜನೆಗೆ ಅನುಮತಿ ನೀಡಲಾಗಿದ್ದು, ಅದಕ್ಕಾಗಿ 28 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ. ಇದರಲ್ಲಿ ಈಗಾಗಲೇ 8 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರ ನೀಡಿರುವ ಮಾಹಿತಿಯಲ್ಲಿ ಹಲವು ಗೊಂದಲಗಳಿವೆ. ಹೀಗಾಗಿ ಸ್ಪಷ್ಟ ಮತ್ತು ಸಮಗ್ರ ವರದಿಯನ್ನು ಸಲ್ಲಿಸಿ ಎಂದು ಸೂಚಿಸಿ ವಿಚಾರಣೆಯನ್ನು ಆ.13ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಈಶ ಫೌಂಡೇಶನ್ ಪರ ಹಾಜರಿದ್ದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಮತ್ತು ಅರ್ಜಿದಾರ ವಕೀಲ ಎ.ವಿ. ಅಮರನಾಥನ್ ಅವರ ನಡುವೆ ಬಿರುಸಿನ ವಾದ ನಡೆಯಿತು. ಹಿಂದಿನ ವಿಚಾರಣೆ ವೇಳೆ ಎ.ವಿ. ಅಮರನಾಥನ್ ಅವರ ವಿರುದ್ಧ ಹೈಕೋರ್ಟ್ ದಂಡ ವಿಧಿಸಿದ್ದ ವಿಚಾರ ಪ್ರಸ್ತಾಪಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ರಿಜಾನ್ಡರ್ ಸಲ್ಲಿಸಿದ್ದ ಅಮರನಾಥನ್, ಸದ್ಗುರು ಜಗ್ಗಿ ವಾಸುದೇವ ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಅವರ ಆಶ್ರಮದಲ್ಲಿ ನಾಲ್ವರು ಯುವತಿಯರು ನಾಪತ್ತೆಯಾಗಿದ್ದಾರೆ. ಈಶ ಪ್ರತಿಷ್ಠಾನ 3 ಸಾವಿರ ಎಕರೆ ಒತ್ತುವರಿ ಮಾಡಿದೆ ಎಂದು ಆರೋಪಿಸಿದ್ದರು.

ಇದಕ್ಕೆ ಆಕ್ಷೇಪಿಸಿದ ಈಶ ಫೌಂಡೇಶನ್ ಪರ ವಕೀಲ ಅಶೋಕ್ ಹಾರನಹಳ್ಳಿ, ಅರ್ಜಿದಾರರು ಸಾರ್ವಜನಿಕ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿ ಹೊಂದಿದ್ದಾರೆಂದು ಆರೋಪಿಸಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಅಮರನಾಥನ್, ನನ್ನ ಪ್ರಕರಣಗಳಲ್ಲಿ ಕೋರ್ಟ್ ದಂಡ ಹಾಕಿದೆ ಎನ್ನುವುದಾದರೆ ಸದ್ಗುರು ಅವರ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು ಎಂದರು. ಜತೆಗೆ, ನನ್ನ ಅರ್ಜಿ ಉದ್ದೇಶ ಜನರ ಹಣ ದುರ್ಬಳಕೆಯಾಗಬಾರದು ಎಂಬುದಷ್ಟೇ ಆಗಿದೆ ಎಂದು ಸ್ಪಷ್ಟಪಡಿಸಿ, ರಿಜಾನ್ಡರ್​ಗೆ ಆಕ್ಷೇಪವಿದ್ದರೆ ಅದನ್ನು ಹಿಂಪಡೆಯುವುದಾಗಿ ತಿಳಿಸಿದರು. ಇದಕ್ಕೆ ಪೀಠ ಒಪ್ಪಿಗೆ ಸೂಚಿಸಿತು.

ಪ್ರಕರಣದ ಹಿನ್ನೆಲೆ:

ಕಾವೇರಿ ನದಿ ಪಾತ್ರದುದ್ದಕ್ಕೂ 252 ಕೋಟಿ ಮರಗಳನ್ನು ನೆಟ್ಟು ಬೆಳೆಸುತ್ತೇವೆ ಎಂದು ಈಶ ಫೌಂಡೇಶನ್​ನ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ತಂಡ ಕಾವೇರಿ ಕೂಗ ಅಭಿಯಾನ ನಡೆಸುತ್ತಿದೆ. ಅದಕ್ಕಾಗಿ ಸಾರ್ವಜನಿಕರಿಂದ ಪ್ರತಿ ಗಿಡಕ್ಕೆ 42 ರೂಪಾಯಿ ಹಣ ಸಂಗ್ರಹಿಸುತ್ತಿದೆ. ಸಾರ್ವಜನಿಕರಿಂದ ಈ ರೀತಿ ಹಣ ಸಂಗ್ರಹಿಸುತ್ತಿರುವುದು ಕಾನೂನು ಬಾಹಿರ ಎಂದು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.