ಬೆಂಗಳೂರು: ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ಮುಂದಿನ ಐದು ದಿನಗಳ ತನಕ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.
ಇಂದು ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದ್ದು, ಜಲಾಶಯಗಳಿಗೆ ಒಳಹರಿವಿಗೆ ಅನುಗುಣವಾಗಿ ನೀರು ಬಿಡುವಂತೆ ಸೂಚನೆ ನೀಡಿದೆ. ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ.
ಈಗ ಸದ್ಯಕ್ಕೆ ಐದು ದಿನಗಳ ತನಕ ಬಿಳಿಗುಂಡ್ಲು ಜಲಾಶಯಕ್ಕೆ ನೀರು ಹರಿಸಬೇಕು. ಮುಂದಿನ ಸಭೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ನೀರು ಹರಿಸುವ ಕುರಿತು ಪರಿಶೀಲನೆ ನಡೆಸಲು ಸಭೆಯಲ್ಲಿ ನಿರ್ಧಾರ ತಗೆದುಕೊಳ್ಳಲಾಯಿತು.
ಈ ತಿಂಗಳ 8ರಂದು ದೆಹಲಿಯಲ್ಲಿ ಕಾವೇರಿ ನೀರು ಪ್ರಾಧಿಕಾರದ ಸಭೆ ನಿಗದಿಗೊಳಿಸಲಾಗಿದೆ.