ಬೆಂಗಳೂರು: ಸ್ವಚ್ಛತಾ ಅಭಿಯಾನ ಅಂಗವಾಗಿ ಹೊಸೂರು ರಸ್ತೆಯ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ‘ಪರಿಸರ ಉಳಿಸಿ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಸರ್ಕಾರದಿಂದ ಸ್ವಚ್ಛತೆಗಾಗಿ ನೀಡಲಾಗುವ ‘ಕಾಯಕಲ್ಪ ಪ್ರಶಸ್ತಿ’ಯನ್ನು ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ಪಡೆದುಕೊಂಡಿದೆ.
ಸರ್ಕಾರಿ ಆಸ್ಪತ್ರೆಗಳ ಪೈಕಿ, ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ಈ ಬಾರಿ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದೆ. ಈ ಆಸ್ಪತ್ರೆ ಆವರಣದೊಳಗೆ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ.
ಸ್ವಚ್ಛತಾ ಕಾರ್ಯಕ್ಕೆ 20 ಲಕ್ಷ ರೂಪಾಯಿ ಅನುದಾನ ದೊರೆತಿದ್ದು, ಆಸ್ಪತ್ರೆ ಸಮಾಜಕ್ಕೆ ಮಾದರಿಯಾಗಿದೆ.