ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ ಭೇಟಿ ಮಾಡಿದ್ದ ಅವರು ಜೊತೆಯಲ್ಲಿ ಕೆಲ ಕಾಂಗ್ರೆಸ್ ಮುಖಂಡರನ್ನು ಕರೆದುಕೊಂಡು ಹೋಗಿದ್ದರು.
ಇದಾದ ಬಳಿಕ ಅವರು ಇದೇ ಮುಖಂಡರ ಜೊತೆ ಶಿವಾನಂದ ವೃತ್ತ ಸಮೀಪವಿರುವ ಕಾಂಗ್ರೆಸ್ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಅವರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ. ದಿಢೀರ್ ಆಗಿ ಕೋಳಿವಾಡ್ ರಾಜ್ಯ ನಾಯಕರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.