ETV Bharat / state

ಕೆ.ಸಿ.ವ್ಯಾಲಿ ನೀರಿನ ಶುದ್ಧತೆ ಬಗ್ಗೆ ಮಾಹಿತಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ - ನೀರಿನ ಶುದ್ಧತೆ ಬಗ್ಗೆ ಮಾಹಿತಿ

ಕೆ.ಸಿ.ವ್ಯಾಲಿ ನೀರಿನ ಶುದ್ಧತೆ ಬಗ್ಗೆ ಆರ್.ಆಂಜನೇಯರೆಡ್ಡಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರ್ಟ್​ಗೆ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್​ ನೀರಿನ ಶುದ್ಧತೆ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರಕ್ಕೆ ಹೈಕೋರ್ಟ್ ನಿರ್ದೇಶನ
author img

By

Published : Sep 5, 2019, 3:22 AM IST

ಬೆಂಗಳೂರು: ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಸಂಬಂಧ ನೀರಿನ ಶುದ್ಧತೆ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ಆರ್.ಆಂಜನೇಯರೆಡ್ಡಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯ ಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗೆ 610 ಎಂಎಲ್‌ಡಿ ನೀರು ಪೂರೈಸುವ ಕೆ.ಸಿ.ವ್ಯಾಲಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಆದರೆ ಆ ನೀರಿನಲ್ಲಿ ಸೀಸ ಮತ್ತು ರಾಸಾಯನಿಕಗಳು ಸೇರಿ ವಿಷಕಾರಿಯಾಗಿದೆ ಎಂದು ಆರೋಪಿಸಿ ನೀರು ಕಲುಷಿತಗೊಂಡಿರುವ ಬಗ್ಗೆ ನ್ಯಾಯಪೀಠದ ಗಮನಕ್ಕೆ ತಂದರು.

ಪ್ರತಿವಾದ ಮಂಡಿಸಿದ ಸರ್ಕಾರಿ ಪರ ವಕೀಲರು, ಕೆ.ಸಿ.ವ್ಯಾಲಿ ನೀರಿನ ಶುದ್ಧತೆ ಬಗ್ಗೆ ಮಾಹಿತಿ ನೀಡಲು ಸಮಯಾವಕಾಶಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಸರ್ಕಾರಿ ಪರ ವಕೀಲರ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಸೆ.24ಕ್ಕೆ ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ನೀರಿನ ಶುದ್ಧತೆ ಕುರಿತು ವರದಿ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.

Intro:ಕೆ.ಸಿ.ವ್ಯಾಲಿ ನೀರಿನ ಶುದ್ಧತೆ ಬಗ್ಗೆ ಮಾಹಿತಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಸಂಬಂಧ ನೀರಿನ ಶುದ್ಧತೆ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ಆರ್.ಆಂಜನೇಯರೆಡ್ಡಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗೆ 610 ಎಂಎಲ್‌ಡಿ ನೀರು ಪೂರೈಸುವ ಕೆ.ಸಿ.ವ್ಯಾಲಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಆದರೆ ಆ ನೀರಿನಲ್ಲಿ ಸೀಸ ಮತ್ತು ರಾಸಾಯನಿಕಗಳು ಸೇರಿ ವಿಷಕಾರಿಯಾಗಿದೆ ಎಂದು ಆರೋಪಿಸಿ ನೀರು ಕಲುಷಿತಗೊಂಡಿರುವ ಬಗ್ಗೆ ನ್ಯಾಯಪೀಠದ ಗಮನಕ್ಕೆ ತಂದರು.

ಪ್ರತಿವಾದ ಮಂಡಿಸಿದ ಸರ್ಕಾರಿ ಪರ ವಕೀಲರು, ಕೆ.ಸಿ.ವ್ಯಾಲಿ ನೀರಿನ ಶುದ್ಧತೆ ಬಗ್ಗೆ ಮಾಹಿತಿ ನೀಡಲು ಸಮಯಾವಕಾಶಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಸರ್ಕಾರಿ ಪರ ವಕೀಲರ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಸೆ.24ಕ್ಕೆ ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ನೀರಿನ ಶುದ್ಧತೆ ಕುರಿತು ವರದಿ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.Body:KN_BNG_13_HIGCIURT_7204498Conclusion:KN_BNG_13_HIGCIURT_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.