ETV Bharat / state

ಸರ್ಕಾರಿ ಆದೇಶದಲ್ಲಿ ತಪ್ಪು ಕನ್ನಡ ಪದ ಬಳಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೆಡಿಎ ಆಗ್ರಹ - government order wrong Kannada words issue

ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಚಿತ್ರೀಕರಣ ನಿಷೇಧ ಆದೇಶವನ್ನು ಹಿಂಪಡೆದ ಆದೇಶ ಪ್ರತಿಯಲ್ಲಿ ಸಾಕಷ್ಟು ತಪ್ಪು ಕನ್ನಡ ಪದಗಳನ್ನು ಬಳಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಡಿಎ ಆಗ್ರಹಿಸಿದೆ.

kda-demands-strict-action-against-use-of-wrong-kannada-words-in-government-order
ಸರ್ಕಾರಿ ಆದೇಶದಲ್ಲಿ ತಪ್ಪು ಕನ್ನಡ ಪದ ಬಳಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೆಡಿಎ ಆಗ್ರಹ
author img

By

Published : Jul 17, 2022, 11:51 AM IST

ಬೆಂಗಳೂರು: ರಾಜ್ಯ ಸರ್ಕಾರದ ಆದೇಶ ಪ್ರತಿಯಲ್ಲಿ ಕನ್ನಡ ಪದಗಳನ್ನು ತಪ್ಪಾಗಿ ಬಳಸಿರುವ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಮರಿಲಿಂಗಗೌಡ ಪಾಟೀಲ್‌ ಎಂಬುವರು ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ದೂರು ಸಲ್ಲಿಸಿ, ಸರ್ಕಾರಿ ಕಚೇರಿಗಳಲ್ಲಿನ ವಿಡಿಯೋ ಚಿತ್ರೀಕರಣ ನಿಷೇಧ ಆದೇಶವನ್ನು ಹಿಂಪಡೆದ ಆದೇಶ ಪ್ರತಿಯಲ್ಲಿ ಸಾಕಷ್ಟು ತಪ್ಪು ಕನ್ನಡ ಪದಗಳನ್ನು ಬಳಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಕನ್ನಡವೇ ಗೊತ್ತಿಲ್ಲ ಎನ್ನುವಂತೆ ಭಾಷೆಗೆ ಅಗೌರವ ಸಲ್ಲಿಸಿದ್ದಾರೆ ಎಂದು ದೂರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಟ್ಯಾಗ್ ಮಾಡಿ ದೂರನ್ನು ಸಲ್ಲಿಸುತ್ತಿದ್ದಾರೆ. ಕನ್ನಡದ ಅರಿವಿಲ್ಲದೆ ಕರ್ನಾಟಕ ಸರ್ಕಾರದಲ್ಲಿ ಗೌರವಾನ್ವಿತ ಹುದ್ದೆಯಲ್ಲಿ ಇದ್ದುಕೊಂಡು ಈ ರೀತಿಯ ತಪ್ಪುಗಳಿಂದ ಕೂಡಿದ ಆದೇಶ ಹೊರಡಿಸಿರುವುದು ಸರ್ಕಾರದ ಜವಾಬ್ದಾರಿ ಅಧಿಕಾರಿಯಾಗಿ ಮಾಡಿರುವ ನಿರ್ಲಕ್ಷ್ಯ ಎಂದು ಪತ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್.ನಾಗಾಭರಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಆದೇಶದಲ್ಲಿ ಕನ್ನಡದ ತಪ್ಪಾದ ಪದಗಳನ್ನು ಬಳಸಿರುವ ಅಧಿಕಾರಿ, ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇನ್ನುಮುಂದೆ ಇಂತಹ ತಪ್ಪುಗಳಾಗದಂತೆ ಎಚ್ಚರ ವಹಿಸುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಆದೇಶದಲ್ಲಿ ತಪ್ಪಾಗಿ ಕನ್ನಡ ಪದ ಬಳಕೆ: ನೆಟ್ಟಿಗರ ಆಕ್ರೋಶದಿಂದ ಎಚ್ಚೆತ್ತ ಸರ್ಕಾರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.