ETV Bharat / state

ಕನ್ನಡ ಕಡ್ಡಾಯ ಆದೇಶ ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ಮೊರೆ ಹೋದ ಕ.ಅ.ಪ್ರಾಧಿಕಾರ

ಪದವಿ ತರಗತಿಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿದ್ದ ರಾಜ್ಯ ಸರಕಾರದ ಆದೇಶಕ್ಕೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ವಿಚಾರಣೆಯನ್ನು ಸೆಪ್ಟೆಂಬರ್​ ತಿಂಗಳಿಗೆ ಮುಂದೂಡಿದೆ.

high court
ಉಚ್ಚ ನ್ಯಾಯಾಲಯ
author img

By

Published : Jul 26, 2022, 8:27 AM IST

ಬೆಂಗಳೂರು: ಕನ್ನಡ ಕಲಿಕೆ ಕಡ್ಡಾಯಗೊಳಿಸಿದ ರಾಜ್ಯ ಸರಕಾರದ ಆದೇಶಕ್ಕೆ ನೀಡಲಾಗಿರುವ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಸೋಮವಾರ ಹೈಕೋರ್ಟ್​ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಕನ್ನಡ ಕಲಿಕೆ ಕಡ್ಡಾಯ ನೀತಿಗೆ ವಿರೋಧ ವ್ಯಕ್ತಪಡಿಸಿರುವ ಅರ್ಜಿದಾರರಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ ತಿಂಗಳಿಗೆ ಮುಂದೂಡಿದೆ.

ಪದವಿ ಹಂತದ ತರಗತಿಗಳಲ್ಲಿ ಒಂದು ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿದ ಸರಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕರ ಸಂಘ ಸೇರಿದಂತೆ ಇತರ ಸಂಘ ಸಂಸ್ಥೆಗಳು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷೆ ಕಲಿಕೆ ಮುಂದುವರಿಸಲು ಸ್ವತಂತ್ರರು ಎಂದು ಆದೇಶಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. ಈ ಬಗ್ಗೆ ಸೋಮವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾ.ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಮುಂದುವರಿದ ವಿಚಾರಣೆ ನಡೆಸಿತು.

ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪರ ವಕೀಲರು ಮಧ್ಯಂತರ ಅರ್ಜಿ ಸಲ್ಲಿಸಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಪದವಿ ತರಗತಿಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ನಿಲುವನ್ನು ಬೆಂಬಲಿಸುತ್ತದೆ.

ಇದನ್ನೂ ಓದಿ: ಕಾರ್ಯಕರ್ತರಿಗೆ ಬಿಜೆಪಿ ಬಂಪರ್ ಕೊಡುಗೆ: ನಿಗಮ ಮಂಡಳಿಗಳಿಗೆ 24ಕ್ಕೂ ಹೆಚ್ಚು ಹೊಸ ಸಾರಥಿಗಳ ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.