ETV Bharat / state

ಕೆಂಪೇಗೌಡ ಜಯಂತಿ ಉತ್ಸವ: ಬೆಂಗಳೂರಿಗೂ ನನಗೂ ಅವಿನಾಭಾವ ಸಂಬಂಧ.. ಡಿಸಿಎಂ ಡಿಕೆಶಿ - ಕೆಂಪೇಗೌಡರ ಜಯಂತಿ ಆಚರಣೆ

ನಾಡಿನೆಲ್ಲೆಡೆ ಇಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ.

DK Sivakumar paid floral tributes to Kempegowda's statue
ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಡಿಕೆ ಶಿವಕುಮಾರ್​
author img

By

Published : Jun 27, 2023, 1:42 PM IST

Updated : Jun 27, 2023, 7:26 PM IST

ರಮಣ ಮಹರ್ಷಿ ಪಾರ್ಕ್​ನಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ಬೆಂಗಳೂರು: ನಾಡಿನೆಲ್ಲೆಡೆ ಇಂದು ಕೆಂಪೇಗೌಡರ ಜಯಂತಿ ಆಚರಣೆ ಹಿನ್ನೆಲೆ ಬೆಂಗಳೂರಿನ ಸದಾಶಿವನಗರದ ರಮಣ ಮಹರ್ಷಿ ಪಾರ್ಕ್​ನಲ್ಲಿ ಮಂಗಳವಾರ ಏರ್ಪಡಿಸಿದ್ದ ಕೆಂಪೇಗೌಡ ಜಯಂತಿ ಉತ್ಸವದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್​ ಪಾಲ್ಗೊಂಡಿದ್ದಾರೆ. ಉತ್ಸವದಲ್ಲಿ ಭಾಗವಹಿಸಿದ ನಂತರ, ತಮಗೂ ಬೆಂಗಳೂರಿಗೂ ಇರುವ ಅವಿನಾಭಾವ ಸಂಬಂಧದ ಬಗ್ಗೆ ಡಿ ಕೆ ಶಿವಕುಮಾರ್​ ಮಾತನಾಡಿದ್ದಾರೆ.

ನನಗೂ ಬೆಂಗಳೂರಿಗೂ ಅವಿನಾಭಾವ ಸಂಬಂಧವಿದೆ. ಆದರೆ ಅದು ಮಾಜಿ ಡಿಸಿಎಂ ಡಾ. ಅಶ್ವತ್ ನಾರಾಯಣಗೆ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ನಾನು 6ನೇ ವಯಸ್ಸಿಗೆ ಶಿಕ್ಷಣಕ್ಕಾಗಿ ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದ್ದೆ ಎಂದರು.

kempegowda jayanti festival
ಕೆಂಪೇಗೌಡ ಜಯಂತಿ ಉತ್ಸವ

"ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಕೆಂಪೇಗೌಡರು ಕಟ್ಟಿದ ಪ್ರದೇಶ. ತಮಿಳುನಾಡಿನ ಗಡಿ ಭಾಗದಲ್ಲಿ ಸಂಗಮದ ಬಳಿ ಕೆಂಪೇಗೌಡರ ಕೋಟೆ ಇದೆ. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಆ ಕೋಟೆ ಸಮೀಪದ ನಿಜಲಿಂಗಪ್ಪ ಅವರ ಮನೆ ಪಕ್ಕ ವೀರೇಂದ್ರ ಪಾಟೀಲ್ ಅವರ ಮನೆ ಇದೆ. ಅದರ ಪಕ್ಕದಲ್ಲಿ ನನ್ನ ತಂದೆ ದೊಡ್ಡಹಾಲಹಳ್ಳಿ ಕೆಂಪೇಗೌಡರ ಮನೆ ಇದೆ. ಇತ್ತೀಚೆಗೆ ಅದನ್ನೂ ಮಾರಿದ್ದೇನೆ. ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೂ ಇರುವ ಸಂಬಂಧ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ ನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಆ ರೀತಿ ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ" ಎಂದು ಮಾಜಿ ಸಚಿವ ಅಶ್ವತ್ ನಾರಾಯಣ ಅವರಿಗೆ ತಿರುಗೇಟು ನೀಡಿದರು.

ಇಂದು ನಾವು ಕೆಂಪೇಗೌಡ ಜಯಂತಿ ನಾವು ಆಚರಿಸುತ್ತಿದ್ದೇವೆ. ನಮ್ಮ ಸರ್ಕಾರ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನಿಸಿದಾಗ ಯಾವ ದಿನ ಜಯಂತಿ ಆಚರಿಸಬೇಕು ಎಂಬುದರ ಬಗ್ಗೆ ದೊಡ್ಡ ಚರ್ಚೆಯಾಗಿತ್ತು. ಆಗ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ, ಇತಿಹಾಸ ತಜ್ಞರನ್ನು ಒಳಗೊಂಡಂತೆ ಸಮಿತಿ ರಚಿಸಲಾಯಿತು. ಈ ಸಮಿತಿ ಅಧ್ಯಯನ ಮಾಡಿ ಜೂನ್ 27ರಂದು ಕೆಂಪೇಗೌಡ ಜಯಂತಿ ಎಂದು ತೀರ್ಮಾನಿಸಿತು. ಅಂದಿನಿಂದ ಸರ್ಕಾರ ಜೂನ್ 27ರಂದು ಕೆಂಪೇಗೌಡ ಜಯಂತಿ ಆಚರಣೆ ಮಾಡಿಕೊಂಡು ಬರುತ್ತಿದೆ ಎಂದರು.

kempegowda jayanti festival
ಕೆಂಪೇಗೌಡ ಜಯಂತಿ ಉತ್ಸವ

ಕೆಂಪೇಗೌಡ ಯಾವತ್ತೂ ಒಂದು ಸಮುದಾಯಕ್ಕೆ ಸೇರಿದವರಲ್ಲ: ಆರ್.‌ ಅಶೋಕ್ ಅವರ ಮುಂದಾಳತ್ವದಲ್ಲಿ ಬೆಂಗಳೂರಿನ ಎಲ್ಲಾ ವಾರ್ಡ್​ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನಿಸಲಾಗಿತ್ತು. ಇದನ್ನು ಗಮನದಲ್ಲಿ ಇಟ್ಟುಕೊಂಡು ಈ ಕೆಂಪೇಗೌಡ ಜಯಂತಿ ಆಚರಣೆಯನ್ನು ರಾಜ್ಯಕ್ಕೆ ವಿಸ್ತರಿಸಿ, ರಾಜ್ಯದ ಎಲ್ಲೆಡೆ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನಿಸಿದೆವು. ಇಂದು ಬೆಂಗಳೂರಿನಲ್ಲಿ ಹಾಗೂ ಹಾಸನದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯುತ್ತಿದೆ. ಕೆಂಪೇಗೌಡ ಪ್ರಾಧಿಕಾರ ಸಭೆಯಲ್ಲಿ ಶೇ 75ಕ್ಕಿಂತ ಹೆಚ್ಚು ಒಕ್ಕಲಿಗರು ಇದ್ದಾರೆ. ಇದನ್ನು ನೋಡಿ ನನಗೆ ನಾಚಿಕೆ ಆಯಿತು. ಕೆಂಪೇಗೌಡ ಯಾವತ್ತೂ ಒಂದು ಸಮುದಾಯಕ್ಕೆ ಸೇರಿದವರಲ್ಲ. ಎಲ್ಲ ಜಾತಿ ಹಾಗೂ ಧರ್ಮಕ್ಕೆ ಸೇರಿದವರಾಗಿದ್ದಾರೆ ಎಂದು ವಿವರಿಸಿದರು.

ಕೆಂಪೇಗೌಡರ ಆಚಾರ ವಿಚಾರ ಜಾತಿ ಮೇಲೆ ನಿಂತಿರಲಿಲ್ಲ. ಅವರು ಒಂದು ವೇಳೆ ಜಾತಿ ಮೇಲೆ ಕೆಲಸ ಮಾಡಿದ್ದರೆ, ಬೆಂಗಳೂರಿನಲ್ಲಿ 52 ವಿವಿಧ ಸಮುದಾಯಗಳ ಪೇಟೆಗಳು ಆಗುತ್ತಿರಲಿಲ್ಲ. ಸಮಾಜದಲ್ಲಿ ಎಲ್ಲ ವರ್ಗದವರಿಗೆ ಸ್ಥಾನಮಾನ ಸಿಗಲು ಶ್ರಮಿಸಿದ್ದಾರೆ. ಇಂದು ನಾವು ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಮೂವರು ಮಹನೀಯರನ್ನು ಸ್ಮರಿಸಬೇಕು, ಅದು ಕೆಂಪೇಗೌಡ, ಕೆಂಗಲ್ ಹನುಮಂತಯ್ಯ ಹಾಗೂ ಎಸ್.ಎಂ ಕೃಷ್ಣ. ಇವರು ಕಟ್ಟಿರುವ ಬೆಂಗಳೂರನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು. ಕೆಂಪೇಗೌಡರ ಸ್ತಂಭ ಹೇಗೆ ಸ್ಮಾರಕವಾಗಿದೆಯೋ ಅದೇ ರೀತಿ ನಾವು ನಮ್ಮ ಕೆಲಸಗಳ ಮೂಲಕ ಸಾಕ್ಷಿ ಗುಡ್ಡೆ ನಿರ್ಮಿಸಬೇಕು. ಬೆಂಗಳೂರು ಕೆಲವು ಭಾಗಗಳು ಮಾತ್ರ ಯೋಜಿತ ನಗರವಾಗಿದ್ದು, ಉಳಿದ ಭಾಗಗಳು ಯೋಜನೆ ರಹಿತವಾಗಿ ಬೆಳೆದುಕೊಂಡಿದೆ. ಇಲ್ಲಿನ ಹವಾಮಾನದಲ್ಲಿ ಬದುಕಿದವರು ಇದನ್ನು ಬಿಟ್ಟು ಹೋಗುವುದಿಲ್ಲ ಎಂದರು.

ಬೆಂಗಳೂರು ಅಭಿವೃದ್ಧಿಗೆ ಸಲಹೆ ನೀಡಿ: ಈ ಬೆಂಗಳೂರು ನೆಲದಲ್ಲಿ ಕೆಂಪೇಗೌಡ, ಕೆಂಗಲ್ ಹನುಮಂತಯ್ಯ, ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮಿ ಹುಟ್ಟಿದ್ದಾರೆ. ಇದು ಈ ನೆಲದ ವೈಶಿಷ್ಟ್ಯತೆ. ಇದನ್ನು ಧರ್ಮವಾಗಿ, ಅಭಿವೃದ್ಧಿ ಹಾಗೂ ಪ್ರಗತಿಯಾಗಿದೆ ಉಳಿಸಿಕೊಂಡು ಹೋಗಬೇಕು. ಹೀಗಾಗಿ ಈ ಬೆಂಗಳೂರು ಅಭಿವೃದ್ಧಿ ಮಾಡಬೇಕು. ನಾನು ಬಹಳ ಉತ್ಸುಕತೆಯಿಂದ ಬೆಂಗಳೂರು ನಗರದ ಜವಾಬ್ದಾರಿ ಹೊತ್ತುಕೊಂಡಿದ್ದೇನೆ. ಬೆಂಗಳೂರು ಅಭಿವೃದ್ಧಿ ಬಗ್ಗೆ ನಾನು ನಿಮ್ಮೆಲ್ಲರ ಸಲಹೆ ಕೇಳಿದ್ದೇನೆ. ನಿಮ್ಮ ಸಲಹೆ ಅಭಿಪ್ರಾಯ ನೀಡಿ. ನಿಮ್ಮ ಸಹಕಾರ ಆಶೀರ್ವಾದ ನಮ್ಮ ಮೇಲಿರಲಿ ಎಂದು ಹೇಳಿದರು.

ಸದಾಶಿವನಗರ ಸಮಾರಂಭದಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶಾಸಕರಾದ ಅಶ್ವತ್ಥ ನಾರಾಯಣ್, ಮುನಿರಾಜು, ಶ್ರೀ ಆದಿ ಚುಂಚನಗಿರಿ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಜಯ ಕರ್ನಾಟಕ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ, ರಾಜ್ಯ ಒಕ್ಕಲಿಗರ ಮಹಾಸಭಾ ಅಧ್ಯಕ್ಷ ಎ ಎಚ್ ಅನಂದ್ ಮತ್ತಿತರರು ಭಾಗವಹಿಸಿದ್ದರು. ಇದಾದ ಬಳಿಕ ಮೈಸೂರು ಬ್ಯಾಂಕ್‌ ವೃತ್ತ ಬಳಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಂಪೇಗೌಡ ಉತ್ಸವ ರಥಯಾತ್ರೆಗೆ ಚಾಲನೆ ನೀಡಿದರು.

ಕೆಂಪೇಗೌಡ ಜಯಂತಿಗೆ ಹೆಚ್​ಡಿಕೆ ಶುಭಾಶಯ: ನಾಡಿನ ಸಮಸ್ತ ಜನತೆಗೆ, ಜಗತ್ತಿನೆಲ್ಲೆಡೆ ನೆಲೆಸಿರುವ ಕನ್ನಡಿಗರೆಲ್ಲರಿಗೂ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಪ್ರಭುಗಳು ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ ಎಂದು ಬಣ್ಣಿಸಿದ್ದಾರೆ.

ಅಭಿವೃದ್ಧಿ, ಶಾಂತಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ಹಾದಿಯಲ್ಲಿ ಸಾಗೋಣ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಬದ್ಧತೆಯಿಂದ ಶ್ರಮಿಸೋಣ ಎಂದು ಹೇಳಿದ್ದಾರೆ.

ದೇವನಹಳ್ಳಿ ಏರ್ಪೋರ್ಟ್​ ನಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ದೇವನಹಳ್ಳಿ ಏರ್ಪೋರ್ಟ್​ ಕೆಂಪೇಗೌಡ ಪ್ರತಿಮೆಗೆ ಸಚಿವ ಕೆ ಹೆಚ್ ಮುನಿಯಪ್ಪ ಪುಷ್ಪನಮನ: ಕೆಂಪೇಗೌಡರ ಜಯಂತಿ ಹಿನ್ನೆಲೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೆಂಪೇಗೌಡರ ಪ್ರತಿಮೆಗೆ ಸಚಿವ ಕೆಹೆಚ್ ಮುನಿಯಪ್ಪ ಪುಷ್ಪಾರ್ಚನೆ ಮಾಡಿದರು. ಕಳೆದ ವರ್ಷ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ ಇದಾಗಿದ್ದು, ಪ್ರತಿಮೆಗೆ ಪುಪ್ಪಾರ್ಚನೆ ಮಾಡಿ ಸಚಿವ ಮುನಿಯಪ್ಪ ಕಾಮಗಾರಿ ವೀಕ್ಷಣೆ ಮಾಡಿದರು. ಇನ್ನೂ ಮುಂದಿನ ಒಂದು ವರ್ಷದಲ್ಲಿ ಥೀಮ್ ಪಾರ್ಕ್ ಹಾಗೂ ಉಳಿದ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 60 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುತ್ತಿರುವ ಥೀಮ್ ಪಾರ್ಕ್, ಕಾಮಗಾರಿ ಬೇಗ ಮುಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಡಿಸಿ ಶಿವಶಂಕರ್ ಸೇರಿದಂತೆ ಒಕ್ಕಲಿಗ ಮುಖಂಡರು ಸಾಥ್ ನೀಡಿದರು.

ಇದನ್ನೂ ಓದಿ: ಜೂ. 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ : ಎಲ್ಲಾ ಜಾತಿ, ಧರ್ಮಕ್ಕೆ ಸಲ್ಲುವ ರಾಜ್ಯಮಟ್ಟದ ಕಾರ್ಯಕ್ರಮ ಎಂದ ಡಿಸಿಎಂ ಡಿ ಕೆ ಶಿವಕುಮಾರ್

Last Updated : Jun 27, 2023, 7:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.