ETV Bharat / state

ಕೆಂಪೇಗೌಡ ಥೀಮ್​ ಪಾರ್ಕ್​ ನಿರ್ಮಾಣಕ್ಕೆ ಶೀಘ್ರ ರೂಪುರೇಷೆ ಸಿದ್ಧ: ಡಿಸಿಎಂ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣ ಸಂಬಂಧ ಸಧ್ಯದಲ್ಲೇ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತದೆ ಎಂದು ಡಿಸಿಎಂ ಡಾ. ಅಶ್ವತ್ಥನಾರಾಯಣ್ ಹೇಳಿದ್ದಾರೆ.

DCM Ashwaththanarayan
ಡಿಸಿಎಂ ಅಶ್ವತ್ಥನಾರಾಯಣ್ ಸಭೆ
author img

By

Published : Jan 8, 2020, 5:24 PM IST

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಹಾಗು ಥೀಮ್ ಪಾರ್ಕ್ ನಿರ್ಮಾಣ ಸಂಬಂಧ ಸಧ್ಯದಲ್ಲೇ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ್ ಹೇಳಿದ್ದಾರೆ.

ಡಿಸಿಎಂ ಅಶ್ವತ್ಥನಾರಾಯಣ್

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್​ವೈ ಬದಲು ಡಿಸಿಎಂ ಅಶ್ವತ್ಥನಾರಾಯಣ್ ಸಭೆಗಳನ್ನು ನಡೆಸಿದರು. ಸಿಎಂ ಸೂಚನೆ ಮೇರೆಗೆ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ, ರೋರಿಕ್‌ಎಸ್ಟೇಟ್ ಅಭಿವೃದ್ಧಿ, ಫಿಲ್ಮ್ ಸಿಟಿ ನಿರ್ಮಾಣ ಕುರಿತು ಅಧಿಕಾರಿಗಳ ಜೊತೆ ಡಿಸಿಎಂ ಸಭೆ ನಡೆಸಿದರು. ಈ ವೇಳೆ ಯೋಜನಗಳ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಕೆಂಪೇಗೌಡರ 46 ಪಾರಂಪರಿಕ ತಾಣಗಳನ್ನು ಅಭಿವೃದ್ಧಿ ಪಡಿಸುವುದು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಮೆ ನಿರ್ಮಿಸುವ ಬಗ್ಗೆ ಚರ್ಚೆ ಆಗಿದೆ. 80 ಅಡಿ ಎತ್ತರದ ಪ್ರತಿಮೆ ನಿರ್ಮಿಸಲು ನಿರ್ಧರಿಸಿದ್ದು, 40 ಅಡಿ ಅಡಿಪಾಯ, 80 ಅಡಿ ಪ್ರತಿಮೆ ಸ್ಥಾಪಿಸಲಾಗುತ್ತದೆ. ಕಂಚಿನ ಪ್ರತಿಮೆ ಅಥವಾ ಬೇರೆ ಪ್ರತಿಮೆ ಎನ್ನುವ ಬಗ್ಗೆ ನಿರ್ಧಾರ ಆಗಿಲ್ಲ, ಸ್ಥಳದ ಬಗ್ಗೆಯೂ ಅಂತಿಮ ನಿರ್ಧಾರ ಆಗಬೇಕಿದೆ. ಹಾಗಾಗಿ ಸಧ್ಯದಲ್ಲೇ ಸ್ಥಳ ಅಂತಿಮಗೊಳಿಸಿ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

20 ಎಕರೆ ಪ್ರದೇಶದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು, ಐ ಡೆಕ್ ಸಂಸ್ಥೆಯವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಯೋಜನೆಗಳ ರೂಪುರೇಷೆ ಬಗ್ಗೆ ಚರ್ಚೆ ಆಗಿದೆ. ಆದ್ರೆ ಅಂತಿಮ ನಿರ್ಧಾರ ಆಗಬೇಕಿದೆ ಎಂದು ಡಿಸಿಎಂ ಹೇಳಿದರು.

ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ಮಾಡುವ ಬಗ್ಗೆ ಚರ್ಚೆ ಆಗಿದೆ. ಸ್ಥಳ ನಿರ್ಧಾರ ಇನ್ನೂ ಆಗಬೇಕಿದೆ, ಚಿತ್ರರಂಗಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳು ಫಿಲ್ಮ್ ಸಿಟಿಯಲ್ಲಿರಲಿವೆ. ಡಿಸ್ನಿ ಲ್ಯಾಂಡ್ ಸೇರಿದಂತೆ ದೇಶ ವಿದೇಶದ ಹಲವು ಫಿಲ್ಮ್ ಸಿಟಿಗಳ ಅಧ್ಯಯನ ಮಾಡಿ ಉತ್ತಮ ವಾದ ಫಿಲ್ಮ್ ಸಿಟಿ ನಿರ್ಮಿಸಲು ನಿರ್ಧರಿಸಿದ್ದೇವೆ. ಬೆಂಗಳೂರಿನ ಹೊರವಲಯದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಲಿದೆ ಎಂದು ಡಾ. ಅಶ್ವತ್ಥನಾರಾಯಣ್​ ಮಾಹಿತಿ ನೀಡಿದರು.

ರೋರಿಚ್ ದೇವಿಕಾ ರಾಣಿ ಎಸ್ಟೇಟ್ ನಲ್ಲಿ ಫಿಲ್ಮ್ ಸಿಟಿ ಮಾಡುವ ಪ್ರಸ್ತಾಪ ಕೈಬಿಡಲಾಗಿದೆ. ಅಲ್ಲಿ ಉತ್ತಮ ಕಲೆ ಮತ್ತು ಕರಕುಶಲ ಗ್ರಾಮ ನಿರ್ಮಾಣ ಮಾಡಲಾಗುತ್ತದೆ. ದೇಶದಲ್ಲೇ‌ ಹೆಮ್ಮ ಪಡುವ ರೀತಿಯಲ್ಲಿ ಆಧ್ಯಾತ್ಮಿಕ,‌ ಸಾಂಸ್ಕೃತಿಕ, ಸಾಮಾಜಿಕ ಅಂಶಗಳನ್ನು ಒಳಗೊಂಡ‌ ಉತ್ತಮ ಕೇಂದ್ರ ನಿರ್ಮಾಣ ಮಾಡಲಾಗುತ್ತದೆ ಎಂದು ಡಿಸಿಎಂ ತಿಳಿಸಿದರು.

Intro:

ಬೆಂಗಳೂರು:ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಹಾಗು ಥೀಮ್ ಪಾರ್ಕ್ ನಿರ್ಮಾಣ ಸಂಬಂಧ ಸಧ್ಯದಲ್ಲೇ ಅಂತಿಮ ರೂಪುರೇಷೆ ಸಿದ್ದಪಡಿಸಲಾಗುತ್ತದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ವೈ ಬದಲು ಡಿಸಿಎಂ ಅಶ್ವತ್ಥನಾರಾಯಣ್ ಸಭೆಗಳನ್ನು ನಡೆಸಿದರು.ಸಿಎಂ ಸೂಚನೆ ಮೇರೆಗೆ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ, ರೋರಿಕ್‌ಎಸ್ಟೇಟ್ ಅಭಿವೃದ್ಧಿ, ಫಿಲ್ಮ್ ಸಿಟಿ ನಿರ್ಮಾಣ ಕುರಿತು ಅಧಿಕಾರಿಗಳ ಜೊತೆ ಡಿಸಿಎಂ ಸಭೆ ನಡೆಸಿದರು.ಯೋಜನಗಳ ಸಮಗ್ರ ಮಾಹಿತಿ ಪಡೆದುಕೊಂಡರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ್,ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಕೆಂಪೇಗೌಡರ 46 ಪಾರಂಪರಿಕ ತಾಣಗಳನ್ನು ಅಭಿವೃದ್ಧಿ ಪಡಿಸುವುದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಮೆ ಮಾಡುವ ಬಗ್ಗೆ ಚರ್ಚೆ ಆಗಿದೆ.80 ಅಡಿ ಎತ್ತರದ ಪ್ರತಿಮೆ ನಿರ್ಮಿಸಲು ನಿರ್ಧಾರಿಸಿದ್ದು,40 ಅಡಿ ಅಡಿಪಾಯ, 80 ಅಡಿ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ, ಕಂಚಿನ ಪ್ರತಿಮೆ ಅಥವಾ ಬೇರೆ ಪ್ರತಿಮೆ ಎನ್ನುವ ಬಗ್ಗೆ ನಿರ್ಧಾರ ಆಗಿಲ್ಲ, ಸ್ಥಳದ ಬಗ್ಗೆಯೂ ಅಂತಿಮ ನಿರ್ಧಾರ ಆಗಬೇಕಿದೆ ಸಧ್ಯದಲ್ಲೇ ಸ್ಥಳ ಅಂತಿಮಗೊಳಿಸಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

20 ಎಕರೆ ಪ್ರದೇಶದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು, ಐ ಡೆಕ್ ಸಂಸ್ಥೆ ಯವರ ಜೊತೆಗೆ ಚರ್ಚೆ ನಡೆಸಲಾಯಿತು. ಯೋಜನೆಗಳ ರೂಪುರೇಷೆ ಬಗ್ಗೆ ಚರ್ಚೆ ಆಗಿದೆ ಆದರೆ ಅಂತಿಮ ನಿರ್ಧಾರ ಆಗಬೇಕಿದೆ ಎಂದರು.

ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ಮಾಡುವ ಬಗ್ಗೆ ಚರ್ಚೆ ಆಗಿದೆ. ಸ್ಥಳ ನಿರ್ಧಾರ ಇನ್ನು ಆಗಬೇಕಿದೆ, ಚಿತ್ರರಂಗಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯ ಫಿಲ್ಮ್ ಸಿಟಿಯಲ್ಲಿರಲಿದೆ.ಡಿಸ್ನಿ ಲ್ಯಾಂಡ್ ಸೇರಿದಂತೆ ದೇಶ ವಿದೇಶದ ಹಲವು ಫಿಲ್ಮ್ ಸಿಟಿಗಳ ಅಧ್ಯಯನ ಮಾಡಿ ಉತ್ತಮ ವಾದ ಫಿಲ್ಮ್ ಸಿಟಿ ಮಾಡಲು ನಿರ್ಧರಿಸಿದ್ದೇವೆ ಬೆಂಗಳೂರಿಗೆ ಹೊರವಲಯದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಲಿದೆ ಎಂದರು.

ರೋರಿಚ್ ದೇವಿಕಾ ರಾಣಿ ಎಸ್ಟೇಟ್ ನಲ್ಲಿ ಫಿಲ್ಮ್ ಸಿಟಿ ಮಾಡುವ ಪ್ರಸ್ತಾಪ ಕೈ ಬಿಡಲಾಗಿದೆ. ಅಲ್ಲಿ ಉತ್ತಮ ಕಲೆ ಮತ್ತು ಕರಕುಶಲ ಗ್ರಾಮ ನಿರ್ಮಾಣ ಮಾಡಲಾಗುತ್ತದೆ. ದೇಶದಲ್ಲೇ‌ ಹೆಮ್ಮ ಪಡುವ ರೀತಿಯಲ್ಲಿ ಆಧ್ಯಾತ್ಮಿಕ,‌ಸಾಂಸ್ಕೃತಿಕ, ಸಾಮಾಜಿಕ ಅಂಶ ಒಳಗೊಂಡ‌ ಉತ್ತಮ ಕೇಂದ್ರ ನಿರ್ಮಾಣ ಮಾಡಲಾಗುತ್ತದೆ ಎಂದರು.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.