ETV Bharat / state

ಕೆಂಗಲ್ ಸ್ಮಾರಕ ಸ್ಮೃತಿ ಉದ್ಯಾನವನವಾಗಿ ಅಭಿವೃದ್ಧಿ, ಇದೇ ವರ್ಷ ಕೆಂಗಲ್ ಜೀವನಚರಿತ್ರೆ ಗ್ರಂಥ ಬಿಡುಗಡೆ: ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರ 115 ನೇ ಜನ್ಮದಿನಾಚಾರಣೆಯನ್ನು ವಿಧಾನಸೌಧದ ಆವರಣದಲ್ಲಿ ಆಚರಿಸಲಾಯಿತು.

Chief Minister Basavaraj Bommayi
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌
author img

By

Published : Feb 10, 2023, 11:48 AM IST

ಬೆಂಗಳೂರು :ವಿಧಾನಸೌಧದ ಆವರಣದಲ್ಲಿ ಇಂದು ವಿಧಾನಸೌಧದ ಶಿಲ್ಪಿ, ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರ 115 ನೇ ಜನ್ಮದಿನಾಚಾರಣೆಯ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ 2 ನೇ ಮುಖ್ಯಮಂತ್ರಿ , ಧೀಮಂತ ನಾಯಕ, ಕೇಂದ್ರ ರೈಲ್ವೆ ಸಚಿವ, ಕರ್ನಾಟಕದ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕೆಂಗಲ್ ಹನುಮಂತಯ್ಯನವರಿಗೆ ಇಂದು ಅವರ ಜನ್ಮದಿನದಂದು ಗೌರವಾರ್ಪಣೆ ಮಾಡಿದ್ದೇವೆ. ವಿಧಾನಸೌಧ ಇಷ್ಟು ಸುಂದರವಾಗಿ ಕರ್ನಾಟಕದ ರಾಜಧಾನಿಯಲ್ಲಿ ತಲೆ ಎತ್ತಲು ಅವರು ಕಾರಣೀಭೂತರಾಗಿದ್ದಾರೆ. ಒಂದು ಮಿಷನ್ ರೀತಿಯಲ್ಲಿ ಪರಿಶ್ರಮ ಹಾಕಿದ್ದರು. ತಂತ್ರಜ್ಞಾನ ಇಲ್ಲದ ಕಾಲದಲ್ಲಿ ಅತ್ಯಂತ ಭವ್ಯವಾಗಿ ನಿರ್ಮಾಣ ಮಾಡಿದ್ದು ಕೆಂಗಲ್ ಹನುಮಂತಯ್ಯ ಅವರು‌ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಸ್ಮೃತಿ ಉದ್ಯಾನವನ : ಕೆಂಗಲ್​ ನಲ್ಲಿರುವ ಅವರ ಸ್ಮಾರಕವನ್ನು ಸ್ಮೃತಿ ಉದ್ಯಾನವನ ಎಂದು ಅಭಿವೃದ್ಧಿ ಪಡಿಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ರಾಮನಗರದಲ್ಲಿ ನಿರ್ಮಾಣವಾಗುತ್ತಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆಯನ್ನು ಆದಷ್ಟು ಬೇಗನೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೊಮ್ಮಯಿ ತಿಳಿಸಿದರು. ಪ್ರತಿ ಕನ್ನಡಿಗನಿಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಬದುಕು, ಹೋರಾಟದ ಬಗ್ಗೆ ಪರಿಚಯಿಸುವ ಗ್ರಂಥವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪ್ರತಿಮೆ ಸ್ಥಾಪನೆ : ಕೆಂಗಲ್ ಹನುಮಂತಯ್ಯ ಜೀವನ ಚರಿತ್ರೆಯನ್ನು ಒಗ್ಗೂಡಿಸಿ ಅಧಿಕೃತ ಗ್ರಂಥ ಸಿದ್ಧಪಡಿಸಿ ಈ ವರ್ಷ ಬಿಡುಗಡೆ ಮಾಡಲಾಗುತ್ತದೆ. ಈಗಾಗಲೇ ರಾಮನಗರದಲ್ಲಿ ಕೆಂಗಲ್ ಹನುಮಂತ ಯ್ಯನವರ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಆದಷ್ಟು ಬೇಗನೆ ಪ್ರತಿಮೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೂ ಬೆಂಗಳೂರು- ಮೈಸೂರು ರಸ್ತೆಯ ಮಾರ್ಗದ ಪ್ರಮುಖ ಸ್ಥಳದಲ್ಲಿ ಅವರ ಪ್ರತಿಮೆ ನಿರ್ಮಾಣಕ್ಕೆ ಬಿಬಿಎಂಪಿಯಲ್ಲಿ ಪ್ರಸ್ತಾವನೆ ಇದೆ ಎಂದರು.

ಅದಕ್ಕೆ ಕೂಡಲೇ ಒಪ್ಪಿಗೆ ನೀಡಿ ಆ ಕೆಲಸವನ್ನು ಈ ವರ್ಷವೇ ಪ್ರಾರಂಭಿಸಲಾಗುವುದು. ಕೆಂಗಲ್ ನಲ್ಲಿರುವ ಅವರ ಸ್ಮಾರಕವನ್ನು ಸ್ಮೃತಿ ಉದ್ಯಾನವನ ಎಂದು ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ಅದಕ್ಕೆ ಅಗತ್ಯ ಅನುದಾನವನ್ನೂ ಒದಗಿಸಲಾಗುವುದು. ಅವರ ಸ್ಮರಣೆ ನಿರಂತರವಾಗಿರಲಿ ಎಂದರು.

ಕರ್ನಾಟಕದ ಅಭಿವೃದ್ಧಿಗೆ ಭದ್ರ ಬುನಾದಿ : ಕರ್ನಾಟಕ ರಾಜ್ಯ ಸ್ಥಾಪನೆಯಾಗಲು ಮತ್ತು ಕನ್ನಡ ಮಾತನಾಡುವ ಎಲ್ಲಾ ಜನರನ್ನು ಒಗ್ಗೂಡಿಸಿದ ಪ್ರಮುಖರಲ್ಲಿ ಕೆಂಗಲ್ ಹನುಮಂತಯ್ಯ ಅವರು ಅಗ್ರಗಣ್ಯರು. ಅಂದಿನ ಮೈಸೂರಿನ ಪ್ರಜಾ ಪ್ರತಿನಿಧಿ ಸಭೆಯಿಂದ ಹಿಡಿದು ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರಾಗಿ, ಕರ್ನಾಟಕದ ಪ್ರಾರಂಭಿಕ ರಾಜಕಾರಣದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ ಧೀಮಂತ ನಾಯಕರು. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ನೀಡಿ, ಕರ್ನಾಟಕದ ಅಭಿವೃದ್ಧಿಗೆ ಭದ್ರಬುನಾದಿಯನ್ನು ಹಾಕಿದವರು ಕೆಂಗಲ್​ ಹನುಮಂತಯ್ಯ ಅವರು ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ :ಟಾರ್ಗೆಟ್‌ ಬೆಂಗಳೂರು: 28 ಕ್ಷೇತ್ರಕ್ಕೂ ಪ್ರಭಾರಿಗಳ ನೇಮಿಸಿದ ಕೇಸರಿ ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.