ETV Bharat / state

ರವಿ ಪೂಜಾರಿ ವಶಕ್ಕೆ ಕೇಳಿದ ಕೇರಳ ಪೊಲೀಸ್: ಜೈಲಿನಲ್ಲೇ ವಿಚಾರಣೆ ನಡೆಸಲು ಕೋರ್ಟ್ ಸಮ್ಮತಿ

ರವಿ ಪೂಜಾರಿಯನ್ನು ವಶಕ್ಕೆ ಪಡೆಯಲು ಅನುಮತಿ ನೀಡುವಂತೆ ಕೋರಿ ಕೇರಳದ ಎರ್ನಾಕುಲಂ ಸಿಸಿಬಿ ವಿಭಾಗದ ಇನ್ಸ್‌ಪೆಕ್ಟರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 65ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ.

Kerala Police on hearing of Ravi Poojary arrest news
ರವಿ ಪೂಜಾರಿ ವಶಕ್ಕೆ ಕೇಳಿದ ಕೇರಳ ಪೊಲೀಸ್
author img

By

Published : Feb 18, 2021, 8:28 PM IST

ಬೆಂಗಳೂರು: ಕೇರಳದ ಬ್ಯೂಟಿ ಪಾರ್ಲರ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸಲು ಕೇರಳದ ಎರ್ನಾಕುಲಂ ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ.

ಓದಿ: ದೇಣಿಗೆ ನೀಡಲ್ಲವೆಂದ ಸಿದ್ದರಾಮಯ್ಯ ಹಿಂದೂ ವಿರೋಧಿಯಲ್ಲ; ಯತೀಂದ್ರ

ರವಿ ಪೂಜಾರಿಯನ್ನು ವಶಕ್ಕೆ ಪಡೆಯಲು ಅನುಮತಿ ನೀಡುವಂತೆ ಕೋರಿ ಕೇರಳದ ಎರ್ನಾಕುಲಂ ಸಿಸಿಬಿ ವಿಭಾಗದ ಇನ್ಸ್‌ಪೆಕ್ಟರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 65ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ.

ಎರ್ನಾಕುಲಂ ಸಿಸಿಬಿ ಪೊಲೀಸರು ಆರೋಪಿ ಪೂಜಾರಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಯೇ ಐದು ದಿನಗಳ ಕಾಲ ಔಪಚಾರಿಕವಾಗಿ ಬಂಧಿಸಿ ವಿಚಾರಣೆ ನಡೆಸಬಹುದು. ಆದರೆ ಈ ಸಂದರ್ಭದಲ್ಲಿ ಆರೋಪಿ ಪರ ವಕೀಲರು ಹಾಗೂ ಕಾರಾಗೃಹದ ಮುಖ್ಯ ಅಧೀಕ್ಷಕರು ಹಾಜರಿರಬೇಕು. ಈ ಸಂಬಂಧ ತನಿಖಾಧಿಕಾರಿ ವರದಿ ಸಿದ್ಧಪಡಿಸಿ ಎರ್ನಾಕುಲಂನ ಸಂಬಂಧಿತ ನ್ಯಾಯಾಲಯಕ್ಕೆ ಸಲ್ಲಿಸಬಹುದು. ಈ ಬಗ್ಗೆ ಆರೋಪಿ ಪರ ವಕೀಲರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:

ಕೇರಳ ಪೊಲೀಸರು ರವಿ ಪೂಜಾರಿ ವಿರುದ್ಧ ಬ್ಯೂಟಿ ಪಾರ್ಲರ್‌ಗೆ ನುಗ್ಗಿ ಮಹಿಳೆಯೊಬ್ಬರನ್ನು ಗುಂಡಿಟ್ಟು ಕೊಂದ ಆರೋಪದಡಿ ಎರ್ನಾಕುಲಂ ದಕ್ಷಿಣ ಪೊಲೀಸ್ ಠಾಣೆಯಲ್ಲಿ 2018ರ ಡಿ. 15ರಂದು ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಎರ್ನಾಕುಲಂ ಸಿಸಿಬಿ ಪೊಲೀಸರು ತನಿಖೆ ನಡೆಸಿ ಆರೋಪಿ ವಿರುದ್ಧ ಸ್ಥಳೀಯ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ 2019ರ ಮಾ. 3ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಸ್ತುತ ರವಿ ಪೂಜಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆತನನ್ನು ವಶಕ್ಕೆ ಪಡೆದು ಎರ್ನಾಕುಲಂ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲು ಅನುಮತಿ ನೀಡುವಂತೆ ಕೋರಿ ನಗರದ ಅಲ್ಲಿನ ಪೊಲೀಸರು ಬೆಂಗಳೂರಿನ 65ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.