ETV Bharat / state

ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್​ 2 ಸಂಗೀತ ಬಳಕೆ; ಎಫ್​ಐಆರ್​ ವಜಾ ಕೋರಿದ ಕಾಂಗ್ರೆಸ್ ಅರ್ಜಿ ತಿರಸ್ಕೃತ - ಎಂಆರ್​ಟಿ ಮ್ಯೂಸಿಕ್​ ಸಂಸ್ಥೆ

ಕಾಂಗ್ರೆಸ್ ಭಾರತ್​ ಜೋಡೋ ಯಾತ್ರೆ ಪ್ರಚಾರ ವಿಡಿಯೋಗೆ ಕೆಜಿಎಫ್​ 2 ಸಿನಿಮಾದ ಸಂಗೀತ ಬಳಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಎಂಆರ್​ಟಿ ಮ್ಯೂಸಿಕ್​ ಸಂಸ್ಥೆ ಕಾಂಗ್ರೆಸ್​ ನಾಯಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿತ್ತು.

High Court
ಹೈಕೋರ್ಟ್​
author img

By

Published : Jun 28, 2023, 3:53 PM IST

Updated : Jun 28, 2023, 4:09 PM IST

ಬೆಂಗಳೂರು: ಕೃತಿಸ್ವಾಮ್ಯ ಉಲ್ಲಂಘನೆ ಆರೋಪದಡಿ ತಮ್ಮ ವಿರುದ್ಧ ಯಶವಂತಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ವಜಾ ಮಾಡುವಂತೆ ಕೋರಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಮತ್ತು ಇತರ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿದೆ. ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಥೆ ಅವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ನ್ಯಾ. ಎಂ. ನಾಗಪ್ರಸನ್ನ ಅವರ ನೇತೃತ್ವದ ಪೀಠ ನಿರಾಕರಿಸಿತು.

ಅಲ್ಲದೆ, "ಅರ್ಜಿದಾರರು ಅನುಮತಿ ಪಡೆಯದೇ ಸೋರ್ಸ್ ಕೋಡ್ ತಿರುಚಿದ್ದು (ಟ್ಯಾಂಪರ್), ಅದನ್ನು ಬಳಕೆ ಮಾಡಿರುವುದು ಅನುಮಾನರಹಿತವಾಗಿ ದೂರುದಾರರ ಕೃತಿಸ್ವಾಮ್ಯದ ಉಲ್ಲಂಘನೆಗೆ ಸಮನಾಗಿದೆ. ಅರ್ಜಿದಾರರು ದೂರುದಾರರ ಕೃತಿಸ್ವಾಮ್ಯವನ್ನು ಲಘುವಾದ ರೀತಿಯಲ್ಲಿ ಬಳಕೆ ಮಾಡಿದ್ದು, ಇದು ಮೇಲ್ನೋಟಕ್ಕೆ ಸಾಕ್ಷ್ಯ ಪರಿಶೀಲಿಸಬೇಕಾದ ಪ್ರಕರಣವಾಗಿದ್ದು, ತನಿಖೆಯಿಂದ ಹೊರಬರಬೇಕಿದೆ. ಹೀಗಾಗಿ, ಅರ್ಜಿ ವಜಾ ಮಾಡಲಾಗಿದೆ" ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ದೇಶದಾದ್ಯಂತ ಭಾರತ್ ಜೋಡೋ ಯಾತ್ರೆಯ ಪ್ರಚಾರ ವಿಡಿಯೋಗೆ ಕೆಜಿಎಫ್-2 ಕನ್ನಡ ಸಿನಿಮಾದ ಮುದ್ರಿತ ಸಂಗೀತವನ್ನು ಬಳಕೆ ಮಾಡುವ ಮೂಲಕ ಕೃತಿಚೌರ್ಯ ಎಸಗಲಾಗಿದೆ ಎಂದು ಆರೋಪಿಸಿ ಎಂಆರ್​ಟಿ ಮ್ಯೂಸಿಕ್ ಸಂಸ್ಥೆಯು ಕಾಂಗ್ರೆಸ್ ನಾಯಕರ ವಿರುದ್ಧ ಪ್ರತ್ಯೇಕವಾಗಿ ಸಿವಿಲ್ ಮತ್ತು ಕ್ರಿಮಿನಲ್ ದಾವೆ ಹೂಡಿತ್ತು.

ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್​: ಕಾಂಗ್ರೆಸ್​ ನಾಯಕರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪ್ರಕರಣದ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಒಂದು ವಾರ ವಿಸ್ತರಿಸಿ ಆದೇಶ ನೀಡಿತ್ತು. ಮಾತ್ರವಲ್ಲದೆ ಈ ರೀತಿ ಮತ್ತೆ ತಡೆಯಾಜ್ಞೆಯನ್ನು ಮುಂದೂಡುವುದಿಲ್ಲ ಎಂದು ಮೌಖಿಕವಾಗಿ ಹೇಳಿತ್ತು. ವಾರದ ಹಿಂದೆ ಮತ್ತೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಅಲ್ಲದೆ ಇತ್ಯರ್ಥವಾಗುವವರೆಗೂ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನೇ ವಿಸ್ತರಿಸಿ, ವಿಚಾರಣೆ ಮುಂದೂಡಿತ್ತು.

ಕಾಂಗ್ರೆಸ್​ ಪಕ್ಷದ ಸಂವಹನ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್​ ರಮೇಶ್​, ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥ ಸುಪ್ರಿಯಾ ಶ್ರೀನಾಥೆ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಕೃತಿಸ್ವಾಮ್ಯ ಕುರಿತ ಪ್ರಕರಣ ಬಾಕಿ ಇದೆ ಎಂಬ ಕಾರಣ ನೀಡಿ ಕ್ರಿಮಿನಲ್ ಪ್ರಕ್ರಿಯೆ ತಡೆ ಹಿಡಿಯುವಂತಿಲ್ಲ: ಹೈಕೋರ್ಟ್

Last Updated : Jun 28, 2023, 4:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.