ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಬದಲಾವಣೆ ಬಗ್ಗೆ ಮುನಿಯಪ್ಪ ಬೆಂಬಲಿಗರು ನಿನ್ನೆ ಕೋಲಾರದಲ್ಲಿ ಹೇಳಿಕೆ ನೀಡಿದ್ದರಿಂದ ಕ್ರಮಕ್ಕೆ ಮುಂದಾಗಿರುವ ಗುಂಡೂರಾವ್ ವಿರುದ್ದ ಕೆ.ಎಚ್.ಮುನಿಯಪ್ಪ ಗರಂ ಆಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಬೆಂಬಲಿಗರನ್ನು ಅಮಾನತು ಮಾಡುವ ಚಿಂತನೆಗೆ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ದಿನೇಶ್ ಗುಂಡೂರಾವ್ ವಿರುದ್ಧ ಕೂಗಾಡಿದ ಮುನಿಯಪ್ಪ ಬೇಸರದಿಂದ ಹೊರನಡೆದರು ಎನ್ನಲಾಗಿದೆ. ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಂಸದ ಕೆಹೆಚ್ ಮುನಿಯಪ್ಪ ಬೆಂಬಲಿತರನ್ನ ವಿರುದ್ಧ ಕ್ರಮ ಕೈಗೊಂಡಿರುವ ಕಾಂಗ್ರೆಸ್ ಈಗಾಗಲೇ ಅವರನ್ನ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.