ETV Bharat / state

ಖರ್ಗೆ ಖಂಡ್ರೆ ವಿರುದ್ಧ ವರ್ಣಭೇದ ನಿಂದನೆ.. ಆರಗ ಜ್ಞಾನೇಂದ್ರ ವಿರುದ್ಧ ದೂರು ನೀಡಿದ ವೀರಶೈವ ಮಹಾಸಭಾ

ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಸಚಿವ ಈಶ್ವರ ಖಂಡ್ರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರಗ ಜ್ಞಾನೇಂದ್ರ ವಿರುದ್ಧ ವೀರಶೈವ ಮಹಾಸಭಾ ದೂರು ನೀಡಿದೆ.

complaint against Araga Gyanendra
ಅರಗ ಜ್ಞಾನೇಂದ್ರ ವಿರುದ್ಧ ದೂರು ನೀಡಿದ ವೀರಶೈವ ಮಹಾಸಭಾ
author img

By

Published : Aug 2, 2023, 9:15 PM IST

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ್ ಖಂಡ್ರೆ ವಿರುದ್ಧ ಸಂವಿಧಾನ ಬಾಹಿರ ಹೇಳಿಕೆ ನೀಡಿರುವ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಅಸಮಾನತೆ, ವರ್ಣಭೇದ, ಜನಾಂಗೀಯ ಮತ್ತು ಪ್ರಾಂತ್ಯವಾರು ನಿಂದನೆ ಮೂಲಕ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಕಾರಣರಾಗಿದ್ದು, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಆಗಸ್ಟ್ 1 ರಂದು ಶಾಸಕ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಅರಣ್ಯ ಮತ್ತು ಪರಿಸರ ಖಾತೆ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್​ ಖಂಡ್ರೆ ಹಾಗೂ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆಯವರ ತಲೆಮೇಲೆ ಕೂದಲು ಮುಚ್ಚಿಕೊಂಡಿರುವುದರಿಂದ ಕರಕಲಾಗದಂತೆ ಉಳಿದುಕೊಂಡಿರುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ವರ್ಣಭೇದ, ಜನಾಂಗೀಯ ನಿಂದನೆ ಮತ್ತು ಪ್ರಾಂತ್ಯವಾರು ಭೇದವನ್ನುಂಟು ಮಾಡಲು ಕಾರಣರಾಗಿದ್ದಾರೆ. ಈ ವಿಷಯ ಎಲ್ಲಾ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ರೀತಿಯ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ, ಪ್ರಾಂತ್ಯವಾರು ಘರ್ಷಣೆಗೆ ಕಾರಣರಾಗಿದ್ದಾರೆ ಎಂದು ದೂರಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆ ಕಾರ್ಯದರ್ಶಿ ಹೆಚ್ ಎಂ ರೇಣುಕ ಪ್ರಸನ್ನ ಉಲ್ಲೇಖಿಸಿದ್ದಾರೆ.

ಬಸವಣ್ಣನವರ ನಾಡಿನಿಂದ ಬಂದಂತಹ ಹಾಗೂ ಬಸವಾದಿ ಶರಣರ ಆಶಯಗಳನ್ನು ಮೈಗೂಡಿಸಿಕೊಂಡು ಅದರಂತೆ ಸಾರ್ವಜನಿಕ ಜೀವನದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಮತ್ತು ಈಶ್ವರ್​ ಖಂಡ್ರೆಯವರ ವಿರುದ್ಧ ಸಂವಿಧಾನ ಬಾಹಿರ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿರುವ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಬಂಧಿಸಬೇಕೆಂದು ಎಂದು ಠಾಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ದುರ್ದೈವ:ಸಚಿವ ಖಂಡ್ರೆ

ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮತ್ತು ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಕುರಿತು ಹೇಳಿಕೆ ನೀಡುವ ಮೂಲಕ ರಾಜ್ಯದ ಅದರಲ್ಲೂ ಇಡೀ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ. ಇದು ಮಾಜಿ ಸಚಿವರ ಘನತೆಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಆರಗ ಜ್ಞಾನೇಂದ್ರ ಅವರು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ, ನೆರಳಿಲ್ಲ. ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ಎಂದು ಹೇಳಿದ್ದಾರೆ. ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆಗೆ ಮಾತ್ರವಲ್ಲದೆ ಇಡೀ ಕಲ್ಯಾಣ ಕರ್ನಾಟಕದ ಜನತೆಯ ಬೇಷರತ್ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ಇದನ್ನೂಓದಿ:ಲೋಕಸಭಾ ಸೀಟ್ ಗೆಲ್ಲೋ ಸಭೆಯಲ್ಲ, ಸೂಟ್ ಕೇಸ್ ಟಾರ್ಗೆಟ್ ಕೊಡುವ ಸಭೆ: ರವಿಕುಮಾರ್ ಟೀಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.