ETV Bharat / state

ಗಂಭೀರ ಸ್ಥಿತಿಯಲ್ಲಿರುವ ಅಹ್ಮದ್ ಪಟೇಲ್ ಆರೋಗ್ಯ ಚೇತರಿಕೆಗೆ ಖರ್ಗೆ ಪ್ರಾರ್ಥನೆ - Ahammad patil

ಕೋವಿಡ್​​ನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್​ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆ ಅವರ ಚೇತರಿಕೆಗಾಗಿ ಕಾಂಗ್ರೆಸ್ ಮುಖಂಡರು ಪ್ರಾರ್ಥಿಸುತ್ತಿದ್ದು, ಮಲ್ಲಿಕಾರ್ಜುನ್ ಖರ್ಗೆ ಸಹ ಅವರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.

Kharge pray for Ahmed Patel's health recovery
ಗಂಭೀರ ಸ್ಥಿತಿಯಲ್ಲಿರುವ ಅಹ್ಮದ್ ಪಟೇಲ್ ಆರೋಗ್ಯ ಚೇತರಿಕೆಗೆ ಖರ್ಗೆ ಪ್ರಾರ್ಥನೆ
author img

By

Published : Nov 16, 2020, 9:02 AM IST

ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿರುವ ರಾಜ್ಯಸಭೆ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಬೇಗ ಗುಣಮುಖರಾಗಲಿ ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಪ್ರಾರ್ಥಿಸಿದ್ದಾರೆ.

ದೆಹಲಿಯಲ್ಲಿ ಕೋವಿಡ್​​ಗಾಗಿ ಚಿಕಿತ್ಸೆ ಪಡೆಯುತ್ತಿರುವ ಅಹ್ಮದ್ ಪಟೇಲ್ ಸ್ಥಿತಿ ಗಂಭೀರವಾಗಿದೆ. ಅವರು ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಈಗ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿದೆ. 71 ವರ್ಷದ ಅಹ್ಮದ್ ಪಟೇಲ್ ಇದುವರೆಗೂ ವೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

  • Wishing @ahmedpatel ji a quick recovery. My thoughts are with the family during this difficult time. I wish for your speedy recovery and good health!

    — Mallikarjun Kharge (@kharge) November 15, 2020 " class="align-text-top noRightClick twitterSection" data=" ">

ಇದೀಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರುಗ್ರಾಮದ ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಈ ಮಧ್ಯೆ ಹಿರಿಯ ಕಾಂಗ್ರೆಸ್ ನಾಯಕನ ಆರೋಗ್ಯ ಚೇತರಿಕೆಗೆ ಹಲವು ನಾಯಕರು ಹಾರೈಸಿದ್ದು, ಮಲ್ಲಿಕಾರ್ಜುನ್ ಖರ್ಗೆ ಟ್ವೀಟ್​​​ ಮೂಲಕ ಅಹ್ಮದ್ ಪಟೇಲ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಅಹ್ಮದ್ ಪಟೇಲ್ ಅವರೇ ಆದಷ್ಟು ಬೇಗ ಗುಣಮುಖರಾಗಿ ಬನ್ನಿ. ಈ ಸಂದರ್ಭದಲ್ಲಿ ತಮ್ಮ ಕುಟುಂಬದ ಸದಸ್ಯರು ಯಾವ ರೀತಿ ಒತ್ತಡ ಎದುರಿಸುತ್ತಿದ್ದಾರೆ ಎಂಬ ಅರಿವು ನನಗಿದೆ. ಉತ್ತಮ ಆರೋಗ್ಯ ಹೊಂದಿ ತಾವು ಆದಷ್ಟು ಬೇಗ ಆಸ್ಪತ್ರೆಯಿಂದ ಹೊರಬನ್ನಿ ಎಂದು ಆಶಿಸುತ್ತೇನೆ ಎಂದು ಟ್ವೀಟ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.