ETV Bharat / state

ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಿಂದ 'ಸ್ವಚ್ಛ ಭಾರತ್ ಕಾಯಕಲ್ಪಕ್ಕೆ' ಚಾಲನೆ - ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಿಂದ ಹೊಸ ಕಾರ್ಯಕ್ರಮ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಸ್ವಚ್ಛ ಭಾರತ್ ಕಾಯಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿತು.

Kidwai Cancer Institute drives Swachh Bharat Kayakalpa program
ಸ್ವಚ್ಛ ಭಾರತ್ ಕಾಯಕಲ್ಪ ಚಾಲನೆ ನೀಡಿದ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ
author img

By

Published : Mar 29, 2022, 9:36 AM IST

ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಸ್ವಚ್ಛ ಭಾರತ್ ಕಾಯಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಕಾಯಕಲ್ಪ ಕೇಂದ್ರ ಸರ್ಕಾರದ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಇದಕ್ಕೆ ಪೂರಕವಾಗಿ ಕಿದ್ವಾಯಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಕಾಯಕಲ್ಪ ಕಾರ್ಯಕ್ರಮ ನಡೆಸಲಾಯಿತು. ಸಂಸ್ಥೆಯ ಆವರಣದಲ್ಲಿ ರ‍್ಯಾಲಿ ಮತ್ತು ವಿದ್ಯಾರ್ಥಿಗಳು ಬೀದಿ ನಾಟಕ ಮಾಡುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಿದರು.

ಕಿದ್ವಾಯಿ ಸಂಸ್ಥೆಗೆ ವಿಶ್ವಮಟ್ಟದ ಖ್ಯಾತಿ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕರಾದ ಡಾ.ಸಿ.ರಾಮಚಂದ್ರ ಮಾತನಾಡಿ, ನಮ್ಮ ಸಂಸ್ಥೆಯು ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದು, ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಹಸಿರೀಕರಣಕ್ಕೆ ಒತ್ತು ನೀಡುವ ಮೂಲಕ ಸಂಸ್ಥೆಯ ಸುತ್ತಮುತ್ತಲೂ ಗಿಡಗಳನ್ನು ನೆಡುವ ಮೂಲಕ ಉತ್ತಮ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಮೂಲಕ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗಿದ್ದು, ಪರಿಸರ ಕಾಪಾಡಲಾಗುತ್ತಿದೆ ಎಂದು ತಿಳಿಸಿದರು.

ತ್ಯಾಜ್ಯ ಸಂಸ್ಕರಣಾ ಘಟಕ: ಸಂಸ್ಥೆಯ ಆವರಣದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ತೆರೆಯಲಾಗಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆಸ್ಪತ್ರೆಯಲ್ಲಿನ ತ್ಯಾಜ್ಯವನ್ನು ಇಲ್ಲಿ ಸಂಗ್ರಹಿಸಲಾಗಿದೆ. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಒತ್ತು ನೀಡುವ ಮೂಲಕ ಉತ್ತಮ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಸುಸ್ಥಿರ ಗಣಿಗಾರಿಕೆಗೆ ಸಮಗ್ರ ಯೋಜನೆ ರೂಪಿಸಿ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.