ETV Bharat / state

Job Alert: ರಾಜ್ಯ ಸರ್ಕಾರದಿಂದ ಡ್ರೈವರ್​ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ.

KLA Job notification for Driver post
KLA Job notification for Driver post
author img

By

Published : Aug 9, 2023, 5:25 PM IST

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಮೂರು ವಾಹಕನ ಚಾಲಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿದ್ದು, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳ 500 ರೂ. ಅರ್ಜಿ ಶುಲ್ಕವನ್ನು ಭರಿಸಬೇಕು.

ವೇತನ: ಈ ಹುದ್ದೆಗೆ ಮಾಸಿಕ 21,400 ರೂ ನಿಂದ 42,000 ರೂ.ವರೆಗೆ ನಿಗದಿ ಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ಈ ಕೆಳಗಿನ ವಿಳಾಸಕ್ಕೆ ನಿಗದಿ ದಿನಕ್ಕೂ ಮುನ್ನವೇ ಸಲ್ಲಿಸಬೇಕು

ಅರ್ಜಿ ಸಲ್ಲಿಕೆ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5047, ಮೊದಲನೆ ಮಹಡಿ, ವಿಧಾನ ಸೌಧ, ಬೆಂಗಳೂರು- 560001

ಈ ಹುದ್ದೆಗೆ ಈಗಾಗಲೇ ಸರ್ಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಕೆ ಆಗಸ್ಟ್​ 5 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 8 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ ಅಭ್ಯರ್ಥಿಗಳು kla.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: Job Alert! ಲೈಬ್ರರಿ ಸೈನ್ಸ್​ ಪದವಿ ಮಾಡಿದ್ದೀರಾ? ಧಾರವಾಡ IITಯಲ್ಲಿದೆ ಉದ್ಯೋಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.