ETV Bharat / state

ಹಾಲಿನ ಉತ್ಪನ್ನಗಳ ಮೇಲಿನ ದರ ಹೆಚ್ಚಳದಿಂದ ಜನಾಕ್ರೋಶ... ಕೊಂಚ ಇಳಿಕೆ ಮಾಡಿ ಕೆಎಂಎಫ್ ಎಂಡಿ ಆದೇಶ!

ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ 1.50 ರಷ್ಟು ಕಡಿಮೆ ಮಾಡಲಾಗಿದೆ ಎಂದು ಕೆ. ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ತಿಳಿಸಿದ್ದಾರೆ.

ಕೆ. ಎಂ.ಎಫ್
ಕೆ. ಎಂ.ಎಫ್
author img

By

Published : Jul 18, 2022, 9:47 PM IST

ಬೆಂಗಳೂರು: ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರ ಮತ್ತು ಇತರ ಹಾಲಿನ ಉತ್ಪನ್ನಗಳನ್ನು ಇಂದಿನಿಂದ ಜಿ.ಎಸ್.ಟಿ ಜಾರಿ ಸಂಬಂಧ ಹೆಚ್ಚಿಸಿ ಪರಿಷ್ಕರಿಸಲಾಗಿತ್ತು. ಈಗ ಕೆಲ ಉತ್ಪನ್ನಗಳ ದರಗಳನ್ನು ಇಳಿಕೆ ಮಾಡಿ ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಆದೇಶ ಹೊರಡಿಸಿದ್ದಾರೆ.

ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ 1.50 ರಷ್ಟು ಕಡಿಮೆ ಮಾಡಲಾಗಿದೆ. ಇಂದು ಈ ಉತ್ಪನ್ನಗಳ ದರಗಳನ್ನು 1 ರೂ. ನಿಂದ 3 ರೂ. ರಷ್ಟು ಹೆಚ್ಚಿಸಲಾಗಿತ್ತು. ಆದರೆ, ಗ್ರಾಹಕರಿಂದ ಬೆಲೆ ಏರಿಕೆಗೆ ಆಕ್ರೋಶ ವ್ಯಕ್ತವಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹಾಲಿನ ಉತ್ಪನ್ನಗಳ ದರ ಇಳಿಕೆ ಮಾಡಿ ಕೆಎಂಎಫ್ ಎಂಡಿ ಆದೇಶ

ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ 10.50ಕ್ಕೆ ನಿಗದಿಯಾಗಿದೆ. ಒಟ್ಟಿನಲ್ಲಿ ಎಲ್ಲ ಹಾಲು ಉತ್ಪನ್ನಗಳ ದರ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ.

ಓದಿ: ಜಿಎಸ್​ಟಿ ಹೆಚ್ಚಳದಿಂದ ಜನರು ಚಿಟ್ ಫಂಡ್​ಗಳಿಗೆ ಹಣ ಕಟ್ಟಲು ಹಿಂಜರಿಯುವಂತಾಗಿದೆ: ಬಸವಲಿಂಗಪ್ಪ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.