ETV Bharat / state

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ... 7 ಮಂದಿ ದುರ್ಮರಣ - kannada news

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಭೀಕರ ಅಪಘಾತ
author img

By

Published : May 7, 2019, 1:27 AM IST

ಆನೇಕಲ್ : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸ್ಥಳದಲ್ಲೇ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಭೀಕರ ಅಪಘಾತ

ತಮಿಳುನಾಡಿನ ವೆಲ್ಲೂರಿನ ಅಂಬುರು ಬಳಿ ಈ ಘಟನೆ ನಡೆದಿದ್ದು, ವೆಲ್ಲೂರಿನ ಗೋಲ್ಡನ್ ಟೆಂಪಲ್​ಗೆ ತೆರಳಿ ಮರಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಕರ್ನಾಟಕ ನೋಂದಣಿ ಸಂಖ್ಯೆ ಹೊಂದಿರುವ ಸ್ವಿಫ್ಟ್ ಡಿಸೈರ್ ಕಾರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಆಗಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಕಾರಿನಲ್ಲಿದ್ದವರ ವಿವರ ತಿಳಿದು ಬಂದಿಲ್ಲ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಶವಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸಾವನ್ನಪ್ಪಿರುವರಲ್ಲಿ ಓರ್ವ ಕರ್ನಾಟಕದವನು ಎಂದು ತಿಳಿದು ಬಂದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.