ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಅಧಿಕಾರ ಮೊಟಕು ಮಾಡಿಲ್ಲ. ಈಗಾಗಲೇ ಸಿಎಂ ಜೊತೆ ಮಾತನಾಡಿದ್ದೇವೆ. ಯಾವುದೇ ಅಧಿಕಾರ ಮೊಟಕು ಇಲ್ಲ ಎಂದಿದ್ದಾರೆ. ಯಾವುದೇ ಅಧಿಕಾರಿಗಳು ಏನಾದರೂ ಆದೇಶ ಮಾಡಿದ್ದರೆ ಅದನ್ನು ವಾಪಸ್ ಪಡೆಯಲಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಅರಮನೆ ಮೈದಾನದಲ್ಲಿ ಮಾತನಾಡಿದ ಅವರು, ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟಕು ಮಾಡಲಾಗಿದೆ. ಅಧಿಕಾರವನ್ನು ಅಧಿಕಾರಿಗಳಿಗೆ ಕೊಡಲಾಗುತ್ತಿದೆ ಎಂದು ಸುದ್ದಿಯಾಗಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಯಾವುದೇ ಆದೇಶ ಆಗಿದ್ದಲ್ಲಿ ಕೂಡಲೇ ಆದೇಶ ರದ್ದು ಮಾಡಲು ಸಿಎಂ ಸೂಚಿಸಿದ್ದಾರೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಯಾವುದೇ ಕಾರಣಕ್ಕೂ ಮೊಟಕುಗೊಳಿಸುವುದಿಲ್ಲ. ಮತ್ತಷ್ಟು ಅಧಿಕಾರ ಕೊಡುವ ಬಗ್ಗೆ ಚರ್ಚೆ ಆಗಿದೆ. ಯಾವುದೇ ಕಾರಣಕ್ಕೂ ಅಧಿಕಾರಿಗಳಿಗೆ ಅಧಿಕಾರ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ಈ ಪ್ರಸ್ತಾಪವನ್ನ ಇಲಾಖೆ ಅಧಿಕಾರಿಗಳು ಕಳುಹಿಸಿದ್ದರೂ ಆ ಪ್ರಸ್ತಾವನೆ ಕಡೆಗಣಿಸಲಾಗುವುದು. ಪಂಚಾಯತ್ ರಾಜ್ ಅಧಿಕಾರವನ್ನ ಅಧ್ಯಕ್ಷರಿಗೆ ಕೊಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: '7ಡಿ ಕಾಯ್ದೆ ರದ್ದಿಗೆ ದಲಿತ ಮುಖಂಡರು ಮನವಿ ಮಾಡಿದರೂ ನೀವೇಕೆ ಮಾಡಲಿಲ್ಲ: ಪೂಜಾರಿ ಪ್ರಶ್ನೆ