ಬೆಂಗಳೂರು: ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸುಳ್ಳು ಕೇಸುಗಳನ್ನು ವಾಪಸ್ ಪಡೆಯುವಂತೆ ಕೋರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಗೃಹ ಮಂತ್ರಿ ಆರಗ ಜ್ಞಾನೇಂದ್ರರವರನ್ನು ಭೇಟಿಯಾದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿ ಪತ್ರವನ್ನು ಗೃಹ ಮಂತ್ರಿಗಳಿಗೆ ಹಸ್ತಾಂತರಿಸಿದರು.
![Kota srinivas poojary](https://etvbharatimages.akamaized.net/etvbharat/prod-images/kn-bng-05-minister-kota-srinivasa-poojary-letter-script-7208083_09082021213539_0908f_1628525139_657.jpg)
ಈ ಹಿಂದೆ ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ಹಿಂದಕ್ಕೆ ಪಡೆದಿದೆ. ಅದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಕೇಸುಗಳು ಬಾಕಿ ಉಳಿದಿವೆ ಎಂದು ಕರಾವಳಿ ಭಾಗದ ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಉಲ್ಲೇಖಿಸಿ, ರಾಜ್ಯದಲ್ಲಿರುವ ಇಂತಹ ಪ್ರಕರಣಗಳ ಬಗ್ಗೆ ಕೂಡಲೇ ಮಾಹಿತಿ ಪಡೆದುಕೊಂಡು ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಸ್ ಪಡೆಯಬೇಕೆಂದು ಮನವಿ ಮಾಡಿದರು.
ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ, ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆದು ಸಚಿವ ಸಂಪುಟದ ಮುಂದೆ ಮಂಡಿಸಿ ಸುಳ್ಳು ಕೇಸುಗಳನ್ನು ವಾಪಸ್ ಪಡೆಯುವ ಭರವಸೆ ನೀಡಿದರು.