ಬೆಂಗಳೂರು : ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯನ್ನು ವಿಧಾನಪರಿಷತ್ನ ಸಭಾ ನಾಯಕರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಸಂಬಂಧ ಸಿಎಂ ಬೊಮ್ಮಾಯಿ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಪತ್ರ ಬರೆದಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಪರಿಷತ್ನ ಸಭಾನಾಯಕರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸರ್ಕಾರದಲ್ಲೂ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ನ ಸಭಾನಾಯಕರಾಗಿದ್ದರು. ಇದೀಗ ಸಿಎಂ ಬೊಮ್ಮಾಯಿ ಮತ್ತೆ ಅವರನ್ನು ಸಭಾನಾಯಕರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ : ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆಯದೆ 1ರಿಂದ 5ನೇ ತರಗತಿಗಳನ್ನ ಪ್ರಾರಂಭಿಸಲ್ಲ : ಸಚಿವ ನಾಗೇಶ್