ETV Bharat / state

ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ ಸಂಖ್ಯೆ.. 25 ರಾಷ್ಟ್ರಗಳಿಂದ ಕನ್ನಡಿಗರು ಭಾಗಿ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿ ಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಕೋಟಿ ದಾಟಿ ನೋಂದಣಿ ಆಗಿದೆ. ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದರು.

koti kannada singing program registration cross crores
ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ
author img

By

Published : Oct 26, 2022, 12:22 PM IST

Updated : Oct 26, 2022, 12:44 PM IST

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇದೇ ತಿಂಗಳು 28 ರಂದು ಆಯೋಜಿಸಿರುವ 'ಕೋಟಿ ಕಂಠ ಗಾಯನ' ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1 ಕೋಟಿ 10 ಲಕ್ಷ ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ. ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದಾರೆ. ಅಕ್ಟೋಬರ್ 28ರಂದು ಕೋಟಿ ಕಂಠಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಲಿದೆ.

ಈ ಕಾರ್ಯಕ್ರಮ ನಿಮಿತ್ತ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿದ್ದು, ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಕ್ಯೂ ಆರ್ ಕೋಡ್ ನಲ್ಲಿ 1.1 ಕೋಟಿ ಹೆಸರುಗಳು ನೋಂದಣಿಯಾಗಿದ್ದವು. ಇದೀಗ ಈ ಸಂಖ್ಯೆ1.10 ಕೋಟಿಗೆ ತಲುಪಿದೆ. ಮುಂದಿ‌ನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಪತ್ರಿಕಾ ಹೇಳಿಕೆ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಭೆ : ಈ ಕಾರ್ಯಕ್ರಮದ ನಿಮಿತ್ತ ಸಚಿವ ಸುನಿಲ್‌ಕುಮಾರ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸಭೆಗಳು ನಡೆದಿವೆ.‌ ಆಟೋ ಚಾಲಕರ ಸಂಘ, ಮಹಿಳಾ ಸ್ವಸಹಾಯ ಸಂಘ, ಸಹಕಾರಿ ಬ್ಯಾಂಕ್, ಗ್ರಾಮ ಪಂಚಾಯಿತಿ, ಐಟಿಬಿಟಿ ಉದ್ಯೋಗಿಗಳು, ವಿಶ್ವವಿದ್ಯಾಲಯ, ಶಾಲಾ-ಕಾಲೇಜು, ಚಾಲಕರ ಸಂಘ ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಸಂಘಟನೆಗಳ ಜತೆಗೆ ಸಚಿವರು ಖುದ್ದು ಸಭೆ ನಡೆಸಿದ್ದಾರೆ.

ಯಾವೆಲ್ಲಾ ಗೀತೆಗಳು : ಅಕ್ಟೋಬರ್‌ 28ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ ಹಾಗೂ ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ.

ಎಲ್ಲೆಲ್ಲಿ: ರಾಜ್ಯ, ಗಡಿನಾಡು, ಸಾಗರೋತ್ತರ ಹೊರತುಪಡಿಸಿ ರಾಜ್ಯದ 15 ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲು, ಗಾಂಧಿ ಪ್ರತಿಮೆ, ಹೈಕೋರ್ಟ್, ಕಂಠೀರವ ಕ್ರೀಡಾಂಗಣ, ವಿಮಾನ, ರೈಲು, ಚಿತ್ರದುರ್ಗದ ಕೋಟೆ, ಕಡಲ ತೀರಗಳಲ್ಲಿ ಕನ್ನಡದ ಗೀತೆ ಮೊಳಗಲಿದೆ.

ಇದನ್ನೂ ಓದಿ : ಕೋಟಿ ಕಂಠ ಗಾಯನಕ್ಕೆ ದೇಶ - ವಿದೇಶಗಳಿಂದ ಉತ್ತಮ ಸ್ಪಂದನೆ : 90 ಲಕ್ಷ ಜನರಿಂದ ನೋಂದಣಿ

Last Updated : Oct 26, 2022, 12:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.