ETV Bharat / state

ಕೋಟಿ ಕಂಠ ಗಾಯನಕ್ಕೆ ದೇಶ - ವಿದೇಶಗಳಿಂದ ಉತ್ತಮ ಸ್ಪಂದನೆ : 90 ಲಕ್ಷ ಜನರಿಂದ ನೋಂದಣಿ - kannada rajyotsava

ಕನ್ನಡದ ಆರು ಹಾಡುಗಳನ್ನು ಗುರುತಿಸಿ ಅಕ್ಟೋಬರ್​ 28 ಕೋಟಿ ಕಂಠದಲ್ಲಿ ಹಾಡವ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ. ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ರೂಪಿಸಿದ್ದು, ಇದ್ದಕ್ಕೆ ಈಗಾಗಲೇ 90 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.

Koti Kanta singing for kannada rajyotsava
ಕೋಟಿ ಕಂಠ ಗಾಯನಕ್ಕೆ ದೇಶ-ವಿದೇಶಗಳಿಂದ ಉತ್ತಮ ಸ್ಪಂದನೆ
author img

By

Published : Oct 24, 2022, 7:12 AM IST

Updated : Oct 24, 2022, 7:19 AM IST

ಬೆಂಗಳೂರು : ಕನ್ನಡ ಸಂಸ್ಕೃತಿ ಇಲಾಖೆ ಇದೇ ತಿಂಗಳು 28 ರಂದು ಆಯೋಜಿಸಿರುವ 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ದೇಶ- ವಿದೇಶಗಳಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಇದುವರೆಗೆ 90 ಲಕ್ಷಕ್ಕೂ ಮೇಲ್ಪಟ್ಟು ಜನರು ನೋಂದಣಿ ಮಾಡಿದ್ದಾರೆ. ಈ ಕಾರ್ಯಕ್ರಮ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿದ್ದು, ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಾಯಿಸಿದ್ದಾರೆ.

ಒಂದು ಕೋಟಿ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಏಕ ಕಾಲದಲ್ಲಿ ಕನ್ನಡದ ಕಂಪು ಪಸರಿಸುವ ಎಂಬ ಗುರಿ ಹೊಂದಲಾಗಿದ್ದು, ಇಲ್ಲಿಯವರೆಗೆ ಕ್ಯೂಆರ್ ಕೋಡ್​ನಲ್ಲಿ 90 ಲಕ್ಷ ನೋಂದಣಿ ಆಗಿರುವುದನ್ನು ಗಮನಿಸಿದರೆ ಕೋಟಿ ಸಂಖ್ಯೆ ಮೀರಿ ಕನ್ನಡ ಪ್ರೇಮಿಗಳು ಈ ವೃಂದ ಗಾಯನದಲ್ಲಿ ಭಾಗವಹಿಸಬಹುದು ಎನ್ನುವ ನಿರೀಕ್ಷೆ ಮೂಡಿದೆ.

ಅಕ್ಟೋಬರ್‌ 28ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ ಹಾಗೂ ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುಪಡಿಸಬಹುದಾಗಿದೆ.

ಸ್ಯಾಂಡಲ್​ವುಡ್​ನಿಂದ ನೀರಸ ಸ್ಪಂದನೆ : ಒಂದೆಡೆ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಹಾಗೂ ಸ್ಪಂದನೆ ವ್ಯಕ್ತವಾಗುತ್ತಿದೆ. ಆದರೆ, ಕನ್ನಡ ಚಿತ್ರರಂಗ ಮಾತ್ರ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿರುವುದು ರಾಜ್ಯ ಸರ್ಕಾರದ ಬೇಸರಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕನ್ನಡ ಸಂಸ್ಕ್ರತಿ ಇಲಾಖೆಯಿಂದ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.

ಹಲವು ಸ್ಟಾರ್ ನಟರಿಗೆ ಖುದ್ದಾಗಿ ಕರೆ ಮಾಡಿ ವಿನಂತಿಸಲಾಗಿದೆ. ಕಾರ್ಯಕ್ರಮಕ್ಕಾಗಿ ವಿಡಿಯೋ ಸಂದೇಶ ನೀಡುವುದಕ್ಕೂ ಕೆಲ ಕಲಾವಿದರು ಬಾಯ್ಬಿಟ್ಟು ಸಂಭಾವನೆ ಕೇಳಿದ್ದಾರೆ. ಕನ್ನಡದ ಕೆಲಸಕ್ಕೆ, ಕನ್ನಡದ ಹಾಡಿಗೆ ಧ್ವನಿಯಾಗುವುದಕ್ಕೆ ಕನ್ನಡ ಚಿತ್ರರಂಗ ನಿರಾಸಕ್ತಿ ತೋರುತ್ತಿರುವುದು ಈಗ ವ್ಯಾಪಕ ಟೀಕೆಗೆ ಕಾರಣವಾಗಿದೆ.

ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಲು ಕರ್ನಾಟಕ ಮಾತ್ರವಲ್ಲ 25 ರಾಷ್ಟ್ರ ಹಾಗೂ 29 ರಾಜ್ಯಗಳಿಂದ ಕನ್ನಡಿಗರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿರುವುದು ಹೆಮ್ಮೆ ಎನಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ. ಬಿಂದು ಸಿಂಧುವಾಗುವ ರೀತಿ ಅಕ್ಟೋಬರ್ 28 ರಂದು ಕನ್ನಡಿಗರ ಧ್ವನಿ ಕೋಟಿ ಮೀರಲಿ ಎಂದು ಆಶಿಸುತ್ತೇನೆ. ಈ ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ನೋಂದಾಯಿಸಿಕೊಳ್ಳಲು kannadasiri.karnataka.gov.in/kkg/public/ ಗೆ ಲಾಗಿಲ್​ ಆಗಿ

ಇದನ್ನೂ ಓದಿ : ಬಹುನಿರೀಕ್ಷಿತ ಎಸ್ಸಿ ಎಸ್ಟಿ ಮೀಸಲು ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಅಧಿಸೂಚನೆ ಹೊರಡಿಸಿದ ಸರ್ಕಾರ

Last Updated : Oct 24, 2022, 7:19 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.