ETV Bharat / state

ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಕೋವಿಡ್ ಸ್ಫೋಟ: ಶಾಲಾ ಮುಖ್ಯಸ್ಥರ ನಿರ್ಲಕ್ಷ್ಯದ ವಿರುದ್ಧ ಪೋಷಕರ ಆಕ್ರೋಶ

ಬೆಂಗಳೂರು ನಗರದ ಹೊರವಲಯದ ಸರ್ಕಾರಿ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಶಾಲೆಯ ವಿರುದ್ಧ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

kovid rules breaks noticed in bengaluru schools
ಸರ್ಕಾರಿ ಶಾಲೆಯಲ್ಲಿ ಕೋವಿಡ್ ಸ್ಫೋಟ
author img

By

Published : Mar 6, 2021, 7:56 AM IST

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕೋವಿಡ್ ಸುರಕ್ಷತೆ ಹೇಗೆ ಹಳಿ ತಪ್ಪಿದೆ ಎನ್ನುವುದಕ್ಕೆ ರಾಜಧಾನಿಯ ಕೆಲವು ಶಾಲೆಗಳು ಉದಾಹರಣೆಯಾಗಿದ್ದು, ಶಾಲಾ ಮುಖ್ಯಸ್ಥರು ಕೊರೊನಾ ಬಗ್ಗೆ ವಹಿಸುತ್ತಿರುವ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಸರ್ಕಾರಿ ಶಾಲೆಯಲ್ಲಿ ಕೋವಿಡ್ ಸ್ಫೋಟ
ನಗರದ ಹೊರವಲಯದ ಸರ್ಕಾರಿ ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಕೆ.ಆರ್ ಪುರಂ ವ್ಯಾಪ್ತಿಯ ಸರ್ಕಾರಿ ಶಾಲೆಯ ಮಕ್ಕಳಿಗೆ ಕೊರೊನಾ ಸೋಂಕು ಹರಡಿದೆ. ಬಿ.ನಾರಾಯಣಪುರದ ಸರ್ಕಾರಿ ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಮೊನ್ನೆ ಇಬ್ಬರು ಶಿಕ್ಷಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ಶಿಕ್ಷಕರು ಎರಡು ದಿನ ಕ್ವಾರಂಟೈನ್ ರಜೆ ಮೇಲೆ ತೆರಳಿ ಕರ್ತವ್ಯಕ್ಕೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.
ಮಕ್ಕಳ ಗಂಟಲು ದ್ರವವನ್ನು ತಪಾಸಣೆಗೆ ಕೊಂಡೊಯ್ದಿದ್ದ ಆರೋಗ್ಯ ಇಲಾಖೆ 7 ಮಕ್ಕಳಲ್ಲಿ ಕೊರೊನಾ ಸೋಂಕು ಇರುವುದನ್ನು ದೃಢಪಡಿಸಿದೆ. ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಶಾಲಾ ಮುಖ್ಯಸ್ಥರ ವಿರುದ್ಧ ಶಾಲಾ ಮಕ್ಕಳು, ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
kovid rules breaks noticed in bengaluru schools
ಸರ್ಕಾರಿ ಶಾಲೆಯಲ್ಲಿ ಕೋವಿಡ್ ಸ್ಫೋಟ
ಇದನ್ನೂ ಓದಿ:ಮಾಧ್ಯಮಗಳ ವಿರುದ್ಧ ಕೋರ್ಟ್ ಮೊರೆ ಹೋದ ಸಚಿವರು: ಇಂದು ಅರ್ಜಿ ವಿಚಾರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.