ಬೆಂಗಳೂರು: ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ ವೈ ರಾಮಪ್ಪರನ್ನು ಉಚ್ಛಾಟಿಸಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಶಿಫಾರಸ್ಸಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.
ಈ ಹಿಂದೆ ಮಾಯಕೊಂಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಮಪ್ಪ, ದಾವಣಗೆರೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು. ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ತಕ್ಷಣಕ್ಕೆ ಜಾರಿಗೆ ಬರುವಂತೆ ಉಚ್ಛಾಟಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಹಾಗೂ ಡಾ ವೈ ರಾಮಪ್ಪ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು.
ಕೆಜಿಎಫ್ ಬಾಬುಗೆ ನೋಟಿಸ್: ಚಿಕ್ಕಪೇಟೆ ವಿಧಾನಸಭೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಆಶಯ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಯೂಸುಫ್ ಷರೀಫ್ ಅವರಿಗೂ (ಕೆಜಿಎಫ್ ಬಾಬು)ಗೆ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಇತ್ತೀಚೆಗೆ ಚಿಕ್ಕಪೇಟೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 350 ಕೋಟಿ ರೂಪಾಯಿ ವೆಚ್ಚದ ಯೋಜನೆಗಳನ್ನು ಪಟ್ಟಿಯನ್ನು ಹೈಕಮಾಂಡ್‌ಗೆ ಜಾಹೀರಾತುಗಳ ಮುಖಾಂತರ ವಿನಂತಿಸಿದ ಆರೋಪ ಇವರ ಮೇಲಿದೆ.
ಇದನ್ನೂ ಓದಿ : ನಿಗಮ ಮಂಡಳಿ ನೇಮಕಾತಿ ರದ್ದು: ಕಾಂಗ್ರೆಸ್ ಸೇರಲು ದಾರಿ ಸುಗಮ ಎಂದ ವಿ ಎಸ್ ಪಾಟೀಲ್